24 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 22- ಜೆಸ್ಕಾಂ ಕೊಪ್ಪಳ ಉಪ ವಿಭಾಗ ವ್ಯಾಪ್ತಿಯ 110/33/11ಕೆವಿ ಎಂ.ಎಂ.ಯು.ಎಸ್ ಕೊಪ್ಪಳ ಸ್ಟೇಷನ್‌ಗೆ ಒಳಪಡುವ ಎಫ್ ೦೯ ಬನ್ನಿಕಟ್ಟಿ ಫೀಡರನ್ ತುರ್ತು ನಿರ್ವಹಣೆ ಕೆಲಸ ನಡೆಸುತ್ತಿರುವ ಪ್ರಯುಕ್ತ ಈ ಸ್ಟೇಷನಗೆ ಒಳಪಡುವ ಎಲ್ಲ ಮಾರ್ಗಗಳಲ್ಲಿ ನವೆಂಬರ್ ೨೪ರಂದು ಬೆಳಿಗ್ಗೆ ೧೦.೩೦ ಗಂಟೆಯಿ0ದ ಸಾಯಂಕಾಲ ೦೪.೩೦ ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಅಂದು ಎಫ್-೦೯ ಬನ್ನಿಕಟ್ಟಿ ಫೀಡರ್‌ಗೆ ಒಳಪಡುವ ಐ.ಬಿ ಎದುರುಗಡೆ, ನೌಕರ ಭವನ, ಸತ್ಯದಾನಪೂರ, ಫಿರ್ ದೋಸ್ ನಗರ, ವಿದ್ಯಾನಗರ, ಎಸ್ ಬಿ ಐ ಬ್ಯಾಂಕ್, ಬಸ್ ಸ್ಟ್ಯಾಂಡ್ ಏರಿಯಾ, ಬನ್ನಿಕಟ್ಟಿ, ಗದಗ ರೋಡ್, ಲೇಬರ್ ಸರ್ಕಲ್, ರೇಲ್ವೆ ಸ್ಟೇಷನ್ ಏರಿಯಾ ಈ ಎಲ್ಲಾ ಮಾರ್ಗಗಳು ೧೧ ಕೆವಿ ಲೈನಗಳು ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಕೆಲಸವು ಬೇಗನೆ ಮುಕ್ತಾಯಗೊಂಡಲ್ಲಿ, ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸ-ಕಾರ್ಯಗಳನ್ನು ಮಾಡಬಾರದೆಂದು ಈ ಮೂಲಕ ಕೋರಲಾಗಿದೆ.

ಒಂದು ವೇಳೆ ವಿದ್ಯುತ್ ಅಫಘಾತ ಸಂಭವಿಸಿದಲ್ಲಿ ಕಂಪನಿಯು ಜವಾಬ್ದಾರರಾಗಿರುವುದಿಲ್ಲ ಎಂದು ಜೆಸ್ಕಾಂ ಕೊಪ್ಪಳ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!