WhatsApp Image 2024-08-05 at 1.45.29 PM

ಸ್ವಾತಂತ್ರ್ಯ ದಿನ ಆಚರಣೆಯ ಪೂರ್ವಭಾವಿ ಸಭೆ ಅಗತ್ಯ ಸಿದ್ಧತೆ ಕೈಗೊಳ್ಳಿ : ಹೆಚ್.ವಿಶ್ವನಾಥ್

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 5- ಆಗಸ್ಟ್ 15ರಂದು ನಡೆಯುವ 78ನೇ ಸ್ವಾತಂತ್ರ್ಯೋತ್ಸವ ದಿನ ಆಚರಣೆ ತಾಲೂಕು ಆಡಳಿತದಿಂದ ಸಂಭ್ರಮದಿಂದ ಅರ್ಥಪೂರ್ಣವಾಗಿ ಅಚ್ಚುಕಟ್ಟಾಗಿ ಆಚರಿಸಿ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತಾಲೂಕು ಕಾರ್ಯ ನಿರ್ವಾಹಕ ದಂಡಾಧಿಕಾರಿ ತಹಶಿಲ್ದಾರ್ ಎಚ್ ವಿಶ್ವನಾಥ್ ಅವರು ನಿರ್ದೇಶನ ನೀಡಿದರು.

ತಾಲೂಕ ಕಚೇರಿಯ ಸಭಾಂಗಣದಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ತಾಲೂಕು ಕ್ರೀಡಾ ಮೈದಾನದಲ್ಲಿ ಬೆಳಿಗ್ಗೆ 9:00 ಗೆ ಸರಿಯಾದ ಸಮಯಕ್ಕೆ ತಾಲೂಕು ಆಡಳಿತದಿಂದ ಮಹಾತ್ಮ ಗಾಂಧೀಜಿಯವರ ಭಾವಚಿತ್ರದ ಜೊತೆಗೆ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಟ್ಟು ಹೂ ಮಾಲೆ ಪುಷ್ಪ ಅರ್ಪಿಸಿ ನಮನ ಸಲ್ಲಿಸಿ ಸ್ಮರಿಸಿ ಸಾರ್ವಜನಿಕ ರಾಷ್ಟ್ರೀಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಯ ತಾಲೂಕ ಮಟ್ಟದ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಅತಿಥಿ ಗಣ್ಯರನ್ನು ಆಹ್ವಾನಿಸಬೇಕು ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಬೇಕು ಪೊಲೀಸ್ ಶಾಲಾ ಕಾಲೇಜು ವಿದ್ಯಾರ್ಥಿಗಳ ತಂಡ ಗಳ ಕವಾಯತು ಪಥ ಸಂಚಲನ ಕಾರ್ಯಕ್ರಮ ಅತ್ಯುತ್ತಮವಾಗಿ ನಡೆಯಲು ತರಬೇತಿ ಮಾಡಿಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಪ್ರತ್ಯೇಕವಾಗಿ ಕುಳಿತುಕೊಳ್ಳಲು ಶಾಮಿಯಾನ ಆಸನದ ವ್ಯವಸ್ಥೆ ಮಾಡಬೇಕು ನುರಿತ ವೈದ್ಯರೊಂದಿಗೆ ತುರ್ತು ಚಿಕಿತ್ಸಾ ಅಂಬುಲೆನ್ಸ್ ಹಾಗೂ ಅಗ್ನಿಶಾಮಕ ವಾಹನದ ವ್ಯವಸ್ಥೆ ಕುಡಿಯುವ ನೀರು ಶೌಚಾಲಯ ಸ್ವಚ್ಛತೆ ಮೈದಾನದಲ್ಲಿ ನಿರ್ವಹಿಸಬೇಕು ನಗರದ ಪ್ರಮುಖ ವೃತ್ತಗಳಲ್ಲಿ ಸರ್ಕಾರಿ ಕಚೇರಿ ಕಟ್ಟಡಗಳಿಗೆ ದೀಪಾಲಂಕಾರ ಎಲ್ಲಾ ಇಲಾಖೆ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಕ್ರೀಡಾ ಮೈದಾನಕ್ಕೆ ಸಮಯಕ್ಕೆ ಹಾಜರಿರಬೇಕು ಸಮಾರಂಭದಲ್ಲಿ ಮಕ್ಕಳಿಂದ ವಿವಿಧ ಸ್ಪರ್ಧೆಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತ ಮಕ್ಕಳಿಗೆ ಮತ್ತು ಎಸ್ ಎಸ್ ಎಲ್ ಸಿ ಪಿ ಯು ಸಿ ನಲ್ಲಿ ಹೆಚ್ಚು ಅಂಕ ಗಳಿಸಿದ ಮಕ್ಕಳಿಗೆ ಪ್ರಶಸ್ತಿ ಪತ್ರ ಬಹುಮಾನ ನೆನಪಿನ ಕಾಣಿಕೆ ಸನ್ಮಾನಿಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಎಲ್ಲಾ ಇಲಾಖೆ ಅಧಿಕಾರಿಗಳು ಸಿಬ್ಬಂದಿಯವರು ಕಡ್ಡಾಯವಾಗಿ ಹಾಜರಾಗಿ ಶಿಸ್ತಿನಿಂದ ತಮ್ಮ ಕಾರ್ಯ ನಿರ್ವಹಿಸಬೇಕು ಲಘು ಉಪಹಾರ ವ್ಯವಸ್ಥೆ ಫರೇಡ್ ವ್ಯವಸ್ಥೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಧ್ವನಿವರ್ಧಕ ಬ್ಯಾನರ್ ಸೇರಿದಂತೆ ಕಾರ್ಯಕ್ರಮದ ವ್ಯವಸ್ಥೆ ಬಗ್ಗೆ ಚರ್ಚಿಸಲಾಯಿತು.

ಆಗಸ್ಟ್ 15 ರಂದು ಬೆಳಿಗ್ಗೆ ಎಂಟು ಗಂಟೆಗೆ ಎಲ್ಲಾ ಸರ್ಕಾರಿ ಹಾಗೂ ಅರೆ ಸರ್ಕಾರಿ ಕಚೇರಿ ಮತ್ತು ಶಾಲಾ ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು ಸಭೆಯಲ್ಲಿ ಸಲಹೆ ಸೂಚನೆ ಯನ್ನು ತಹಶೀಲ್ದಾರರು ಪಡೆದರು ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್ ಎಸ್ ದಂಡಪ್ಪನವರ್ ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯೋತ್ಸವ ಸಮಾರಂಭವನ್ನು ಆಸಕ್ತಿಯಿಂದ ನಾವೆಲ್ಲರೂ ಆಚರಿಸೋಣ ಯಶಸ್ವಿಗೊಳಿಸೋಣ ಎಂದರು.

ಉಪ ತಹಸಿಲ್ದಾರ್ ಸಿದ್ದಾರ್ಥ ಕಾರಂಜಿ ನಗರಸಭಾ ಪೌರಾಯುಕ್ತ ಎಚ್ ಎನ್ ಗುರುಪ್ರಸಾದ್ ರಾಷ್ಟ್ರೀಯ ಸಾಕ್ಷರತಾ ಸದಸ್ಯ ಸಮಾಜ ಸುಧಾರಕ ಎ ಅಬ್ದುಲ್ ನಬಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಗುರಪ್ಪ ಕ್ಷೇತ್ರ ಸಂಪನ್ಮೂಲ ಶಿಕ್ಷಣ ಸಮನ್ವಯಾಧಿಕಾರಿ ತಮ್ಮನಗೌಡ ಪಾಟೀಲ್ ತಾಲೂಕು ಆರೋಗ್ಯ ಮುಖ್ಯ ವೈದ್ಯಾಧಿಕಾರಿ ಡಾ ಬಿ ಈರಣ್ಣ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಜಿ ಪ್ರದೀಪ್ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ ಗಾದಿಲಿಂಗಪ್ಪ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ ವರ್ಮಾ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಬಾಷಾ ಸಹಾಯಕ ಕೃಷಿ ನಿರ್ದೇಶಕ ಎಸ್ ಬಿ ಪಾಟೀಲ್ ಜಿಲ್ಲಾ ಪಂಚಾಯತ್ ರಾಜ್ ನೀರಾವರಿ ನಿರ್ಮೂಲನ ಎ ಇ ಇ ರವೀಂದ್ರನಾಥ್ ನಾಯಕ ಕಂದಾಯ ಪರಿವೀಕ್ಷಕ ಮಂಜುನಾಥ ಶೇಖರ್ ಎಸ್ಎಂ ಮಹಾಂತೇಶ್ ದೈಹಿಕ ಶಿಕ್ಷಣಾಧಿಕಾರಗಳಾದ ಈರಣ್ಣ ಉಪೇಂದ್ರ ಸಮಾಜ ಕಲ್ಯಾಣ ಇಲಾಖೆ ಯ ಅಧಿಕಾರಿ ಅಬಕಾರಿ ಪೊಲೀಸ್ ಲೋಕೋಪಯೋಗಿ ಅಗ್ನಿಶಾಮಕ ದಳ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಸಲಹೆ ಸೂಚನೆ ನೀಡಿದರು.

ರಾಷ್ಟ್ರೀಯ ಹಬ್ಬವಾದ 78 ನೇ ಸ್ವಾತಂತ್ರ್ಯೋತ್ಸವ ದಿನದ ಅಂಗವಾಗಿ ತಾಲೂಕ ಮಟ್ಟದ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ಪ್ರಮುಖ ವ್ಯಕ್ತಿಗಳಿಗೆ ಶಿಕ್ಷಕರಿಗೆ ಎಲ್ಲಾ ಶಾಲಾ ಕಾಲೇಜು ಮಕ್ಕಳಿಗೆ ಸಮಾಜ ಸುಧಾರಕ ಜನ ಅಭಿಪ್ರಾಯ ಮುಖಂಡ ದೇಶಪ್ರೇಮಿ ಎ ಅಬ್ದುಲ್ ನಬಿ ಅವರು ಭಾರತದ ರಾಷ್ಟ್ರ ಧ್ವಜದ ಬ್ಯಾಡ್ಜ್ ಗಳನ್ನು ವಿತರಿಸುವರು ಸ್ವಾತಂತ್ರ್ಯೋತ್ಸವದ ಹಬ್ಬವನ್ನು ಯಶಸ್ವಿಗೊಳಿಸಬೇಕೆಂದು ಕಾರ್ಯಕ್ರಮಕ್ಕೆ ಶೋಭೆ ತರಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!