
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಮನವಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, ೨೨- ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸೇವಾ ಜೆಷ್ಠತೆ ಮತ್ತು ಅರ್ಹತೆಯ ಆಧಾರದ ಮೇಲೆ ಪ್ರೌಢಶಾಲೆಗಳಿಗೆ ಬಡ್ತಿ ನೀಡಬೇಕು ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ೨೦೧೬ ರ ಪೂರ್ವದಂತೆ ಮುಖ್ಯಗುರುಗಳ ಹಿರಿಯ ಮುಖ್ಯಗುರುಗಳ ಹುದ್ದೆಗೆ ಬಡ್ತಿ ಯನ್ನು ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿAದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ರವಿವಾರದಂದು ಕೊಪ್ಪಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸರುವ ಅವರು ಕಳೆದ ೬,೭ ವರ್ಷಗಳಿಂದ ಪ್ರಾಥಮಿಕ ಶಾಲಾಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನಮಗೆ ಅಳವಡಿಸಿರುವ ನಿಯಮಗಳು ಮಾರಕವಾಗಿವೆ. ೨೦೧೭ ರಲ್ಲಿ ನೇಮಕಾತಿ ನಿಯಮಗಳು ಮತ್ತು ಹೊಸ ವೃಂದ ಸಿ ಆ್ಯಂಡ್ ಆರ್ ನಿಯಮಗಳು ಅವೈಜ್ಞಾನಿಕವಾಗಿದ್ದು ೨೦೧೬ ರ ಕ್ಕಿಂತ ಮೊದಲು ನೇಮಕಗೊಂಡ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ನಿಯಮಗಳನ್ನು ಅನ್ವಯಮಾಡದೇ ಅರ್ಹ* ಸರಕಾರಿ ನೌಕರರ ಬಾಳಿಗೆ ಮಾರಕವಾಗಿರುವ ಎನ್.ಪಿ.ಎಸ್.ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶರಣಬಸನಗೌಡ್ರ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ.ಬಿ. ಸಂಘಟನಾ ಕಾರ್ಯದರ್ಶಿ ರಮೆಶ ಬುಡ್ಡನಗೌಡ್ರ, ಸಹಕಾರ್ಯದರ್ಶಿ ಗವಿಸಿದ್ದಪ್ಪ ಕೇರಿ.ಹಿರಿಯರಾದ ಸಂಗಪ್ಪ ಅಂಗಡಿ, ಜಿಲ್ಲಾ ಘಟಕದ ಸಹಕಾರ್ಯದರ್ಶಿ ಬಸವರಾಜ ಕಮಲಾಪುರರಿತರರು ಇದ್ದರು.