
ಪಿಡಿಓ ಹುದ್ದೆಗಳ ನೇಮಕಾತಿ ಪರೀಕ್ಷೆ : ನಿಷೇದಾಜ್ಞೆ ಜಾರಿ
ಕರುನಾಡ ಬೆಳಗು ಸುದ್ದಿ
ವಿಜಯನಗರ, 15– ನವಂಬರ್ ೧೬ ಮತ್ತು ೧೭ ರಂದು ನಡೆಯುವ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ ೨೦೦ ಮೀಟರ್ ವ್ಯಾಪ್ತಿಯೊಳಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಎಂ.ಎಸ್.ದಿವಾಕರ ಅವರು ಆದೇಶ ಹೊರಡಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಹೈದ್ರಾಬಾದ್ ಕರ್ನಾಟಕ ವೃಂದದ ೯೭ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ಸುತ್ತ ಮುತ್ತ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಿಸಲು ಆದೇಶಿಸಿ, ಎಲ್ಲಾ ಪರೀಕ್ಷಾ ಕೇಂದ್ರಗಳ ಪ್ರದೇಶದಲ್ಲಿ ಪರೀಕ್ಷಾರ್ಥಿಗಳಲ್ಲದ, ಪರೀಕ್ಷಾ ಉಸ್ತುವಾರಿ ಇಲ್ಲದ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಅಥವಾ ಯಾವುದೇ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಿದೆ.