
ಮತದಾನ ಕೊನೆಗೊಳ್ಳುವ ೪೮ ಗಂಟೆಗಳ ಕಾಲ ಸಂಡೂರು ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆ : ಡಿಸಿ ಮಿಶ್ರಾ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 7- ಸಂಡೂರು ವಿಧಾನಸಭೆ ಉಪಚುನಾವಣೆ-೨೦೨೪ ರ ಹಿನ್ನಲೆಯಲ್ಲಿ ನ.೧೩ ರಂದು ಮತದಾನ ನಡೆಯಲಿದ್ದು, ಮತದಾನ ಕೊನೆಗೊಳ್ಳುವ ೪೮ ಗಂಟೆಗಳ ಅಂದರೆ ನ.೧೧ ರ ಸಂಜೆ ೦೬ ಗಂಟೆಯಿ0ದ ನ.೧೪ ರ ಸಂಜೆ ೦೬ ಗಂಟೆಯವರೆಗೆ ಸಂಡೂರು ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ೨೦೨೩ ರ ಕಲಂ ೧೬೩ ರಡಿ ಹಾಗೂ ಇತರೆ ಜಾರಿಯಲ್ಲಿರುವ ಕಾನೂನು ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ವಿವಿಧ ಷರತ್ತುಗಳನ್ನು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಷರತ್ತುಗಳು : ಸಂಡೂರು ವಿಧಾನಸಭಾ ಕ್ಷೇತ್ರದ (೯೫) ವ್ಯಾಪ್ತಿಯಲ್ಲಿ ೦೫ ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಮತದಾನ ಮುಕ್ತಾಯವಾಗುವವರೆಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ಮನೆ ಮನೆ ಪ್ರಚಾರವನ್ನು ಮಾಡಿಕೊಳ್ಳಬಹುದು.
ಚುನಾವಣಾ ಅಭ್ಯರ್ಥಿ ಅಥವಾ ಬೆಂಬಲಿಗರು ಸೇರಿ ೦೫ ಜನರಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತç, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತçವನ್ನು ತೆಗೆದುಕೊಂಡು ಹೋಗುವುದು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಮತಗಟ್ಟೆ ಕೇಂದ್ರಗಳ ೧೦೦ ಮೀಟರ್ ವ್ಯಾಪ್ತಿಯ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ. ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಭಂದಿಸಿದೆ.
ಕಲ್ಲುಗಳನ್ನು, ಕ್ಷಾರ ಪಧಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತಗಳು ಇತ್ಯಾದಿಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಎಲ್ಲಾ ಮತಗಟ್ಟೆ ಕೇಂದ್ರಗಳ ಸುತ್ತಲಿನ ೨೦೦ ಮೀ. ವ್ಯಾಪ್ತಿಯ ಸ್ಥಳ ನಿಬಂರ್ಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಲಾಗಿದೆ.