
ಅಭಿವೃದ್ಧಿಗೆ ಆಸ್ತಿ ತೆರಿಗೆಯೇ ಆರ್ಥಿಕ ಮೂಲ : ಮೇಯರ್ ನಂದೀಶ್
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 8- ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿಗಳ ತೆರಿಗೆ ಪಾವತಿಗೆ ಅನ್‌ಲೈನ್ ವ್ಯವಸ್ಥೆ ಜಾರಿಯಲ್ಲಿದ್ದು, ಕೈಗಾರಿಕಾ ವಲಯದಲ್ಲಿರುವ ಸಮಸ್ಯೆಗಳ ಪರಿಹಾರಕ್ಕೆ ಕೈಗಾರಿಕಾ ಪ್ರದೇಶದಲ್ಲಿಯೇ ಪ್ರತ್ಯೇಕ ಸಭೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುವೆ ಎಂದು ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಅವರು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೇತೃತ್ವದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಅಧಿಕಾರಿಗಳು `ಅಸ್ತಿ ತೆರಿಗೆ ಸಂಗ್ರಹ ಮತ್ತು ಮೂಲಭೂತ ಸೌಕರ್ಯಗಳು, ಪ್ಲಾಸ್ಟೀಕ್ ಬಳಕೆ, ಇನ್ನಿತರೇ ಸಮಸ್ಯೆಗಳು’ ವಿಷಯದ ಕುರಿತು ನಡೆದ ಕೈಗಾರಿಕೋದ್ಯಮಿಗಳು – ವ್ಯಾಪಾರಿಗಳ ಸಭೆಯಲ್ಲಿ, ಮೇಯರ್ ಮುಲ್ಲಂಗಿ ನಂದೀಶ್ ಅವರು ಸನ್ಮಾನವನ್ನು ಸ್ವೀಕರಿಸಿದ ನಂತರ, ಮಹಾನಗರ ಪಾಲಿಕೆಯ ಅಭಿವೃದ್ಧಿಯು ಶೇ. ೮೦ ರಿಂದ ಶೇ. ೯೦ ರಷ್ಟು ಸಾರ್ವಜನಿಕರು ಪಾವತಿಸುವ ಆಸ್ತಿ ತೆರಿಗೆಯ ಆರ್ಥಿಕ ಮೂಲವನ್ನು ಅವಲಂಭಿಸಿರುತ್ತದೆ. ಸಮಸ್ಯೆಗಳನ್ನು ಪರಿಹರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತದೆ ಎಂದರು.
ಕೈಗಾರಿಕಾ ವಲಯದಲ್ಲಿ ಮೂಲಭೂತ ಸೌಲಭ್ಯಗಳ ಸಮಸ್ಯೆಗಳಿವೆ. ರಸ್ತೆ, ಬೀದಿ ದೀಪ, ಕುಡಿಯುವ ನೀರಿನ ಪೂರೈಕೆ ಸೇರಿ ಅನೇಕ ಸಮಸ್ಯೆಗಳು ಮಹಾನಗರ ಪಾಲಿಕೆಯ ಗಮನಕ್ಕೆ ಬಂದಿವೆ. ಕೆಲ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಬಹುದಾಗಿದೆ. ಕಾರಣ ಕೈಗಾರಿಕಾ ವಲಯದಲ್ಲಿಯೇ ಸಭೆ ನಡೆಸಲಾಗುತ್ತದೆ ಎಂದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಅವರು ಸ್ವಾಗತಿಸಿ, ರಸ್ತೆಗಳು, ಬೀದಿ ದೀಪಗಳ ನಿರ್ವಹಣೆ ಸೇರಿ ಅನೇಕ ಮೂಲಭೂತ ಸಮಸ್ಯೆಗಳಿವೆ. ಸಮಸ್ಯೆಗಳನ್ನು ಪರಿಹರಿಸಿ ಕೈಗಾರಿಕೋದ್ಯಮಿಗಳು ಮತ್ತು ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಜಂಟಿ ಕಾರ್ಯದರ್ಶಿ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ನಿಕಟಪೂರ್ವ ಅಧ್ಯಕ್ಷ ಬಿ. ಮಹಾರುದ್ರಗೌಡ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ವೇಣುಗೋಪಾಲ ಗುಪ್ತಾ, ಬಿ.ವಿ. ಬದ್ರಿನಾರಾಯಣ, ಜೆ. ರಾಜೇಶ್, ವಿಶೇಷ ಆಹ್ವಾನಿತರಾದ ವಾಸುದೇವ ಜಿ. ಸಹಚಾರ್ ಅವರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇರುವ ಮೂಲಭೂತ ಸೌಲಭ್ಯಗಳಾದ ಬೀದಿ ದೀಪಗಳು, ಡ್ರೈನೇಜ್, ರಸ್ತೆಗಳು, ಕುಡಿಯುವ ನೀರು, ಬೀದಿನಾಯಿಗಳ ಹಾವಳಿ, ಬಿಡಾಡಿದನಗಳು ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಸಂಚಾರ, ಕೋತಿಗಳ ಹಾವಳಿ, ಧೂಳು ಇನ್ನಿತರೆಗಳ ಕುರಿತು ವಿಷಯ ಪ್ರಸ್ತಾಪ ಮಾಡಿ, ಪಾಲಿಕೆ ತ್ವರಿತವಾಗಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಬಳ್ಳಾರಿ ಮಹಾನಗರ ಪಾಲಿಕೆಯ ಉಪ ಆಯುಕ್ತ ಅಬ್ದಲ್ ರೆಹಮಾನ್ ಅವರು, ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಅನ್‌ಲೈನ್ ನಲ್ಲಿ ಪಾವತಿಸುವ ಕುರಿತು ವಿವರಣೆ ನೀಡಿದರು. ಜಂಟಿ ಕಾರ್ಯದರ್ಶಿ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ ಅವರು ವಂದನಾರ್ಪಣೆ ಸಲ್ಲಿಸಿದರು.
ಅನ್‌ಲೈನ್ ಮಹಾನಗರ ಪಾಲಿಕೆ ಸದಸ್ಯ ರಾಮಾಂಜಿನೇಯಲು, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಉಪಾಧ್ಯಕ್ಷ ಎಸ್.ದೊಡ್ಡನಗೌಡ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಟಿ. ಶ್ರೀನಿವಾಸರಾವ್, ನೇಕಾರ ನಾಗರಾಜ್, ವೇಣುಗೋಪಾಲ ಗುಪ್ತಾ ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರಾದ ಹ್ಯಾಲೀಸ್‌ಬ್ಲೂನÀ ಕೆ.ಎಂ. ಶಿವಮೂರ್ತಿ ಮತ್ತು ಕೆ.ಎಂ. ಭೋಗೇಶ್ ಹಾಗೂ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.