
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ
ಇಂದು ಅ,1ರಂದು ನಿವೃತ್ತ ಸರ್ಕಾರಿ ನೌಕರರ ಪ್ರತಿಭಟನೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 30- ನಿವೃತ್ತ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕವಾಗಿ ಅ,1 ರಂದು ಪ್ರತಿಭಟನೆ ನಡೆಸುವುದಾಗಿ ವೇದಿಕೆಯ ಜಿಲ್ಲಾ ಸಂಚಾಲಕ ವಾದಿರಾಜ ಇಟಗಿ ಹೇಳಿದರು.
ಅವರು ಸೋಮವಾರ ಕೊಪ್ಪಳ ಮಿಡಿಯಾ ಕ್ಲಬ್ನಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಲಿದ್ದು ಹಂತಹಂತವಾಗಿ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದರು.
ನಿವೃತ್ತರಾದ ನಮ್ಮ ಹೋರಾಟಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ, ರಾಜ್ಯ ನಿವೃತ್ತ ನೌಕರರ ಸಂಘ ಸೇರಿದಂತೆ ಅನೇಕರು ಬೆಂಬಲ ನೀಡಿದ್ದಾರೆ. ನಮ್ಮ ಸೇವೆ ಸರ್ಕಾರಕ್ಕೆ ಮೂರ್ನಾಲ್ಕು ದಶಕ ಇದ್ದರು ಸಹ ನಮ್ಮನ್ನು ಕಡೆಗಣಿಸುತ್ತಿರುವುದನ್ನ ಖಂಡಿಸಿ ಪ್ರತಿಭಟನೆ ನಡೆಸಲಾಗುವುದೇಂದು ತಿಳಿಸಿದರು.
ನಮ್ಮ ಸಂಘ 2022ರ ಜುಲೈ 1ರಿಂದ 2024ರ ಜುಲೈ 31ರ ಅವಧಿಯಲ್ಲಿ ನಿವೃತ್ತಿಯಾದ ನೌಕರರ ವೇದಿಕೆ ಯಾಗಿದ್ದು ಆರನೇ ವೇತನ ಆಯೋಗದ ಲೆಕ್ಕಾಚಾರದ ಅನುಸಾರ ಡಿಸಿಆರ್ಜಿ ಕಮ್ಯುಟೇಶನ್, ಗಳಿಕೆ ರಜೆ ನಗದೀಕರಣಗಳ ನಿವೃತ್ತಿ ಆರ್ಥಿಕ ಸೌಲಭ್ಯ ನೀಡಿದ್ದಾರೆ. ಇದರಿಂದಾಗಿ ನಮಗೆ ಆರ್ಥಿಕವಾಗಿ ಅನ್ಯಾಯವಾಗಿದೆ, 7ನೇ ವೇತನ ಆಯೋಗದ ಲೆಕ್ಕಾಚಾರದ ಅನುಸಾರ ಮುಖ್ಯಮಂತ್ರಿ ಮೇಲಿನ ಅವಧಿಯಲ್ಲಿ ನಿವೃತ್ತರಾದವರಿಗೆ 7ನೇ ವೇತನ ಆಯೋಗದ ಸೌಲಭ್ಯ ನೀಡಬೇಕೆಂದು ಈಗಾಗಲೇ ರಾಜ್ಯದ ಎಲ್ಲೆಡೆಯೂ ಸಚಿವರಿಗೆ ಹಾಗೂ ಶಾಸಕರಿಗೆ ಮನವಿ ಸಲ್ಲಿಸಿದರೂ ನಮ್ಮ ಬೇಡಿಕೆ ಈಡೇರಿಲ್ಲಎಂದು ದೂರಿದರು.
ಈ ಸಂದರ್ಭದಲ್ಲಿ ವೇದಿಕೆಯ ಸಂಚಾಲಕರಾದ ಸುಶಿಲೇಂದ್ರ ದೇಶಪಾಂಡೆ, ಶರಣಯ್ಯ ಸಸಿಮಠ, ಮುಸ್ತಫಾ ಕೆ. ಹಾಗೂ ಎಚ್.ಎನ್. ಮರೇಬಾಳ ಸೇರಿದಂತೆ ಇತರರು ಇದ್ದರು.