
ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಶಿಕ್ಷೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 12- ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಬಾಬಾಖಾನ ಕೊಪ್ಪಳ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೊ)ವು ಆರೋಪಿಗೆ ಶಿಕ್ಷೆ ವಿಧಿಸಿದೆ.
೨೦೧೬ರ ಮೇ ೦೮ ರಂದು ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಮಿತ ಕೇಂದ್ರ ನಿವಾಸಿ ರೋಷನ್ ಬೀ ಇವರು ತನ್ನ ೫ ವರ್ಷದ ಮಗಳನ್ನು ಮನೆಯಲ್ಲಿ ಬಿಟ್ಟು ಹೊರಗೆ ಹೋದಾಗ ಮನೆಯಲ್ಲಿ ತಮ್ಮ ಸಂಬ0ಧಿಯಾದ ಬಾಬಾಖಾನ ಇತನು ಕೂಡ ಮನೆಯಲ್ಲಿದ್ದು ಪಿರ್ಯಾಧಿದಾರರು ಮನೆಯಲ್ಲಿ ಇಲ್ಲದ ಸಮಯ ನೋಡಿಕೊಂಡು ಪಿರ್ಯಾಧಿದಾರರ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಬಲಾತ್ಕಾರ ಸಂಭೋಗ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕೊಪ್ಪಳ ನಗರ ಪೋಲಿಸ ಠಾಣೆಯ ಮಹಿಳಾ ಪಿ.ಎಸ್.ಐ ಫಕೀರಮ್ಮ ಇವರು ದೂರು ಸ್ವೀಕರಿಸಿದ್ದು, ಪ್ರಕರಣದ ತನಿಖೆಯನ್ನು ಸತೀಶ ಪಾಟೀಲ್ ಪಿಐ ಕೊಪ್ಪಳ ನಗರ ಠಾಣೆ ಇವರು ನಿರ್ವಹಿಸಿದ್ದು ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಮೇಲ್ನೋಟಕ್ಕೆ ಸಾಭಿತಾಗಿದ್ದರಿಂದ ಆರೋಪಿತನ ವಿರುದ್ದ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣವು ಸ್ಪೇ.ಎಸ್‌ಸಿ[ಪೋಕ್ಲೋ] ಸಂ: ೫೭/೨೦೧೯ ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ಮಾನ್ಯ ನ್ಯಾಯಾಲಯ ಆರೋಪಿ ಬಾಬಾಖಾನ ಕೊಪ್ಪಳ ಇತನ ಮೇಲಿನ ಆರೋಪಣೆಗಳು ಸಾಭೀತಾಗಿವೆ ಎಂದು ೦೭ ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. ೨೫,೦೦೦ ಗಳ ದಂಡವನ್ನು ಭರಿಸುವಂತೆ ಆದೇಶಿಸಿ ಕುಮಾರ ಡಿ.ಕೆ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರು [ಪೋಕ್ಸೊ] ಕೊಪ್ಪಳ ಇವರು ೨೦೨೪ ರ ಅಕ್ಟೋಬರ್ ೩೦ ರಂದು ತೀರ್ಪು ಹೊರಡಿಸಿರುತ್ತಾರೆ. ಸರ್ಕಾರದ ಪರವಾಗಿ ಗೌರಮ್ಮ ದೇಸಾಯಿ ವಿಶೇಷ ಸರ್ಕಾರಿ ಅಭಿಯೋಜಕರು ಪ್ರಕರಣ ನಡೆಸಿ ವಾದ ಮಂಡಿಸಿದ್ದರು.
ಕೊಪ್ಪಳ ನಗರ ಪೋಲಿಸ್ ಠಾಣೆಯ ಸಿಬ್ಬಂದಿ ಲತೀಫ್, ಸೂರ್ಯಕಾಂತ, ವಿರೇಶ ಹಾಗೂ ಮಹಾದೇವಿ ಇವರು ಸಾಕ್ಷಿದಾರರನ್ನು ಹಾಜರಪಡಿಸಿ ಸಹಕರಿಸಿರುತ್ತಾರೆ ಎಂದು ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.