ರಾಹುಲ್ ಗಾಂಧಿ ಸಂಸತ್ ಸದಸ್ಯತ್ವವನ್ನು ರದ್ದುಗೊಳಿಸಬೇಕೆಂದು ಆಗ್ರಹ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 14- ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲೆಯ ಹಾಗೂ ನಗರ ವತಿಯಿಂದ ನಗರದ ಗಡಿಗಿ ಚೆನ್ನಪ್ಪ ವೃತ್ತದಲ್ಲಿ ನಗರದ ಎಸ್ಸಿ, ಎಸ್ಟಿ, ಒಬಿಸಿ ಮೋರ್ಚಾಗಳ ವತಿಯಿಂದ ಮಿಸಲಾತಿ ರದ್ದುಪಡಿಸುವ ವಿಚಾರವಾಗಿ ವಿದೇಶದಲ್ಲಿ ಕುಳಿತುಕೊಂಡು ಹೇಳಿಕೆ ನೀಡಿರುವ ರಾಹುಲ್ ಗಾಂಧಿ ವಿರುದ್ಧ ಸಂಸತ್ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ನಗರ ಅಧ್ಯಕ್ಷ ಕೆ.ಬಿ.ವೆಂಕಟೇಶ್, ನಗರಪಾಲಿಕೆ ಸದಸ್ಯ ಕೆ.ಎಸ್.ಅಶೋಕ್, ಎಸ್ಸಿ ಮೋರ್ಚಾ ನಗರ ಅಧ್ಯಕ್ಷ ಬಿ.ಇ.ರಾಜೇಶ್, ಗ್ರಾಮಾಂತರ ಅಧ್ಯಕ್ಷ ಶಿವಶಂಕರ್, ಪ್ರಧಾನ ಕಾರ್ಯದರ್ಶಿ ಹೆಚ್.ತಿಪ್ಪೆಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣಾಚಲಂ, ಜಿಲ್ಲಾ ಉಪಾಧ್ಯಕ್ಷ ಚೌದರಿ ಸೀನ, ಕಂಪ್ಲಿ ಪ್ರಧಾನ ಕಾರ್ಯದರ್ಶಿ ಹೆಚ್.ಹುಲಿಯಪ್ಪ ಕಪ್ಪಗಲ್, ಹಿರಿಯ ಮುಖಂಡರಾದ ರಾಮ ಚಂದ್ರಪ್ಪ ಇನ್ನೂ ಮುಂತಾದ ಪಕ್ಷದ ಪ್ರಮುಖರು, ನಾಯಕರು, ಕಾರ್ಯಕರ್ತ ಬಂಧುಗಳು ಆಗಮಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಿದರು.
