
ರಾಜ್ಯಮಟ್ಟದ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ಶಿಪ್ : ಸ್ಪರ್ಧೆಯಲ್ಲಿ ರಜನಿ ಲಕ್ಕಗೆ 6 ಚಿನ್ನ, 1 ಬೆಳ್ಳಿ ಪದಕ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 8- 25ನೇ ರಾಜ್ಯಮಟ್ಟದ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2024 ವತಿಯಿಂದ ಅ.05 ಮತ್ತು 06 ರಂದು ಬೆಂಗಳೂರಿನಲ್ಲಿ ನಡೆದ ಈಜು ಸ್ಪರ್ಧೆಯಲ್ಲಿ ರಜನಿ ಲಕ್ಕ ಅವರು ಆರು ಚಿನ್ನ, ಒಂದು ಬೆಳ್ಳಿ ಪದಕ ಸೇರಿ ೭ ಪದಕಗಳನ್ನು ಗೆದ್ದು ಮುಡಿಗೇರಿಸಿಕೊಂಡಿದ್ದಾರೆ.
ರಾಜ್ಯಮಟ್ಟದ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-೨೦೨೪ ವತಿಯಿಂದ ಆಯೋಜಿಸಿದ್ದ ವಿವಿಧ ಈಜು ಸ್ಪರ್ಧೆಗಳಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸ್ಫರ್ಧಾಳುಗಳು ಭಾಗವಹಿಸಿದ್ದರು. ಜಿಲ್ಲೆಯನ್ನು ಪ್ರತಿನಿಧಿಸಿ ರಜನಿ ಲಕ್ಕ ಅವರು ಆಯ್ಕೆಯಾಗಿದ್ದರು.
ಅವರು, ಈಜು ಸ್ಪರ್ಧೆಯಲ್ಲಿ 100 ಮೀ. ಬ್ಯಾಕ್ ಸ್ಟೊçÃಕ್, 200 ಮೀ. ಐಎಂ, 50 ಮೀ. ಫ್ರೀ ಸ್ಟೆöÊಲ್, 50 ಮೀ. ಬಟ್ಟರ್ಫ್ಲೆöÊ, 4*50 ಫ್ರೀ ರಿಲೇ ವಿಭಾಗಗಳಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಪಡೆದುಕೊಂಡು 6 ಚಿನ್ನ, 1 ಬೆಳ್ಳಿ ಪದಕ ಹಾಗೂ ಪ್ರಶಸ್ತಿ ಪ್ರಮಾಣ ಪತ್ರ ತಮ್ಮದಾಗಿಸಿಕೊಂಡಿದ್ದಾರೆ.
ರಜನಿ ಲಕ್ಕ ಅವರು, ರಾಜ್ಯ ಮಟ್ಟದ, ರಾಷ್ಟಿçÃಯ ಹಾಗೂ ಅಂತರಾಷ್ಟಿçÃಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ೧೦೦ ಕ್ಕೂ ಹೆಚ್ಚು ಪದಕಗಳನ್ನು ಹೊಂದಿದ್ದಾರೆ.
ನವೆ0ಬರ್ 10 ರಿಂದ 12 ರ ವರೆಗೆ ಭೂಪಾಲ್ನಲ್ಲಿ ನಡೆಯುವ ರಾಷ್ಟçಮಟ್ಟದ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2024 ಗೆ ಆಯ್ಕೆಯಾಗಿದ್ದು, ಅಲ್ಲಿ ನಡೆಯುವ ಈಜು ಸ್ಪರ್ಧೆಗಳಲ್ಲಿ ಭಾಗವಹಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ., ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಡಿಸಿ ಮಹಮ್ಮದ್ ಝುಬೇರ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಅವರು ಅಭಿನಂದಿಸಿದ್ದಾರೆ.