ಕೊಪ್ಪಳದ ಅಲ್ಲಮಪ್ರಭು ಬೆಟದೂರು ಹಾಗೂ ಎ.ಜಿ.ಕಾರಟಗಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 30- ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಇಂದುಬಿಡುಗಡೆ ಮಾಡಿದೆ. ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಇದರ ಜೊತೆ ವಿವಿಧ ಸಾಧನೆ ಮಾಡಿದ 50 ಪುರಷರ ಹಾಗೂ 59 ಜನ ಮಹಿಳಾ ಸಾಧಕರಿಗೆ ಪ್ರಶಸ್ತಿಯನ್ನು ಸಹ ಘೋಷಣೆ ಮಾಡಲಾಗಿದೆ.
ಕೊಪ್ಪಳದ ಹಿರಿಯ ಸಾಹಿತಿಗಳಾದ ಬೆಟದೂರು ಹಾಗೂ ಕಾರಟಗಿಯ ಎಜಿ ಕಾರಟಗಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ರಾಜ್ಯೋತ್ಸವ ಪ್ರಶಸ್ತಿಗೆ ಸೇವಾಸಿಂಧು ಪೋರ್ಟಲ್ ಮೂಲಕ ಇದುವರೆಗೂ 1500 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದು, 100ಕ್ಕೂ ಹೆಚ್ಚು ಅರ್ಜಿಗಳು ಭೌತಿಕವಾಗಿ ಸಲ್ಲಿಕೆಯಾಗಿದೆ. ರಾಜ್ಯೋತ್ಸವ ಪ್ರಶಸ್ತಿಗಾಗಿ ವಿವಿಧ ಕ್ಷೇತ್ರಗಳ ಗಣ್ಯರು, ಸಾಧಕರು, ಸಂಘ-ಸ0ಸ್ಥೆಗಳು ಅರ್ಜಿ ಸಲ್ಲಿಸಿವೆ.
ಒಟ್ಟಾರೆ ಬಂದ ಎಲ್ಲ ಅರ್ಜಿಗಳನ್ನು ಗಣನೆಗೆ ತೆಗೆದುಕೊಂಡು ರಾಜ್ಯೋತ್ಸವ ಪ್ರಶಸ್ತಿ ಸಮಿತಿ ಪ್ರಶಸ್ತಿ ವಿಜೇತರ ಪಟ್ಟಿ ಸಿದ್ಧಪಡೆಸಲಾಗಿದೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ರಾಜ್ಯಸರ್ಕಾರ ಸಮಿತಿ ರಚನೆ ಮಾಡಿದ ಬೆನ್ನಲ್ಲೆ ಪ್ರಶಸ್ತಿಗಾಗಿ ಸುಮಾರು 2 ಸಾವಿರಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು.