
2ನೇ ಅಪರ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಅಧಿಸೂಚನೆ
ಕರುನಾಡ ಬೆಳಗು ಸುದ್ದಿ
ವಿಜಯನಗರ, 29- ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ 2ನೇ ಅಪರ ಸರ್ಕಾರಿ ವಕೀಲರ ಹುದ್ದೆಗೆ ಕರ್ನಾಟಕ ಕಾನೂನು ಅಧಿಕಾರಿಗಳು (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 26(3) ರಡಿ ಹುದ್ದೆಯ ಪ್ರಭಾರವನ್ನು ವಹಿಸಿಕೊಳ್ಳುವ ದಿನಾಂಕದಿAದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ಅಧಿಸೂಚನೆ ಸಂಖ್ಯೆ: ಲಾ-ಎಲ್ ಎಡಿ/01/2024, ದಿನಾಂಕ: 01.01.2024 ರಂತೆ ನೇಮಕಾತಿ ಮಾಡಲಾಗಿದ್ದು, ಪ್ರಸ್ತುತ ಸದರಿ ಹುದ್ದೆಗೆ ನೇಮಕಾತಿ ಮಾಡಲು ಕಾನೂನು ಇಲಾಖೆಯ ಮಾನ್ಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಅಧಿಸೂಚನೆಯನ್ನು ಹೊರಡಿಸಿರುತ್ತಾರೆ.
ಆದ್ದರಿಂದ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ) ರನ್ವಯ ನೇಮಕಾತಿ ಮಾಡಲು ಏಳು (07) ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿದ ಅರ್ಹ ವಕೀಲರು ತಮ್ಮ ಪೂರ್ಣ ವೈಯಕ್ತಿಕ ಹಾಗೂ ಸೇವಾ ವಿವರಗಳೊಂದಿಗೆ ಲಿಖಿತ ಅರ್ಜಿಯನ್ನು (ನಿಗದಿತ ನಮೂನೆಯಲ್ಲಿ) ದ್ವಿಪ್ರತಿಯಲ್ಲಿ ಜಿಲ್ಲಾಧಿಕಾರಿಗಳು, ವಿಜಯನಗರ ಇವರ ಕಾರ್ಯಾಲಯ ಕಚೇರಿಯ ಸಮಯದಲ್ಲಿ ಖುದ್ದಾಗಿ ಅಥವಾ ಅಂಚೆಯ ಮೂಲಕ ಸೆಪ್ಟೆಂಬರ್ 11ರ ಸಂಜೆ 5.30ರೊಳಗೆ ಸಲ್ಲಿಸಬಹುದಾಗಿದೆ. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.