5

ಸಂಡೂರು ಉಪಚುನಾವಣೆಯ ಮತ ಎಣಿಕೆ ಕೇಂದ್ರಕ್ಕೆ ಚುನಾವಣಾಧಿಕಾರಿ ಭೇಟಿ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 22- ಸಂಡೂರು ವಿಧಾನಸಭೆ ಉಪಚುನಾವಣೆ ಸಂಬ0ಧ ಮತಗಳ ಎಣಿಕೆ ಕಾರ್ಯ ನ.೨೩ ರಂದು ಬೆಳಿಗ್ಗೆ ೦೮ ಗಂಟೆಯಿ0ದ ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜರುಗಲಿದ್ದು, ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ಮತ ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ, ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.

ಇಂದು ಬೆಳಿಗ್ಗೆ ೮ ಗಂಟೆಗೆ ಮತ ಎಣಿಕಾ ಕಾರ್ಯ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಸ್ಟಾçಂಗ್ ರೂಂಗಳನ್ನು ತೆರೆಯುವುದು, ಪೋಸ್ಟಲ್ ಬ್ಯಾಲೆಟ್‌ಗಳ ಎಣಿಕೆಗೆ ಸಿದ್ಧ ಮಾಡಿಕೊಳ್ಳುವುದು, ಮತ ಎಣಿಕಾ ಕಾರ್ಯ ನೆರವೇರಿಸುವ ಅಧಿಕಾರಿ, ಸಿಬ್ಬಂದಿಗಳು, ಮಾಧ್ಯಮದವರು ಮತ್ತು ಏಜೆಂಟರುಗಳ ಮತ ಎಣಿಕಾ ಕೇಂದ್ರಕ್ಕೆ ಪ್ರವೇಶ ಕಲ್ಪಿಸಲು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಪರಿಶೀಲಿಸಿದರು.

ಈಗಾಗಲೇ ಮತ ಎಣಿಕಾ ಕೊಠಡಿಗಳನ್ನು ಅಗತ್ಯ ಬ್ಯಾರಿಕೇಡ್, ಎಣಿಕಾ ಟೇಬಲ್‌ಗಳ ವ್ಯವಸ್ಥೆ, ಮತ ಎಣಿಕಾ ಕೇಂದ್ರಕ್ಕೆ ಪ್ರವೇಶ ಕಲ್ಪಿಸುವ ದ್ವಾರದಲ್ಲಿ ಭದ್ರತೆ ಮುಂತಾದ ಕಾರ್ಯಗಳ ಬಗ್ಗೆಯೂ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಇದ್ದರು.

Leave a Reply

Your email address will not be published. Required fields are marked *

error: Content is protected !!