8

ಶಾಲಾ ಪೂರ್ವ ಶಿಕ್ಷಣದಿಂದ ಮಕ್ಕಳ ಕಲಿಕೆಗೆ ಸಹಕಾರಿ : ರೋಹಿಣಿ ಕೊಟೆಗಾರ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 28- ಶಾಲಾ ಪೂರ್ವ ಶಿಕ್ಷಣದಿಂದ ಮಕ್ಕಳ ಕಲಿಕೆಗೆ ಸಹಕಾರಿಯಾಗುತ್ತದೆ ಎಂದು ಕೊಪ್ಪಳ ಅಭಿವೃದ್ಧಿ ಯೋಜನಾಧಿಕಾರಿಗಳಾದ ರೋಹಿಣಿ ಕೊಟೆಗಾರ ಅವರು ಹೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಲಬುರ್ಗಿ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ ಹಾಗೂ ಕಲಿಕೆ ಟಾಟಾ ಸಹಯೋಗದಲ್ಲಿ ಶಾಲಾಪೂರ್ವ ಶಿಕ್ಷಣ ಬಲವರ್ಧನೆ ಕಾರ್ಯಕ್ರಮದಡಿ ಕೊಪ್ಪಳ ಶಿಶು ಅಭಿವೃದ್ಧಿ ಯೋಜನೆಯ ಕೊಪ್ಪಳ ಬಿ ವಲಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಆಗಸ್ಟ್ 27ರಂದು ನಗರದ ಗೌರಿ ಅಂಗಳದ ಸರ್ಕಾರಿ ಶಾಲೆಯಲ್ಲಿ ನಡೆದ ೫ನೇ ಹಂತದ ಮೂರು ದಿನದ ಶಾಲಾ ಪೂರ್ವ ಶಿಕ್ಷಣ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಾಲಾ ಪೂರ್ವ ಶಿಕ್ಷಣದಿಂದ ಮಕ್ಕಳ ಕಲಿಕೆಗೆ ಸಹಾಯವಾಗುತ್ತದೆ. ಪ್ರತಿ ಅಂಗನವಾಡಿ ಕೇಂದ್ರದಲ್ಲಿಯೂ, ಮಕ್ಕಳ ಭಾಷೆ ಬೌದ್ಧಿಕ ಬೆಳವಣಿಗೆಗೆ ಶಾಲಾ ಪೂರ್ವ ಶಿಕ್ಷಣವನ್ನು ಮಕ್ಕಳಿಗೆ ಕಲಿಸಬೇಕೆಂದು. ಈ ಹಿನ್ನೆಲೆಯಲ್ಲಿ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ತರಬೇತಿಯಲ್ಲಿ ಮಾಹಿತಿ ತಿಳಿದುಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಅವರು, ತರಬೇತಿಯ ಸಾಮಗ್ರಿಗಳನ್ನು ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶಿವಶರಣಪ್ಪ ಗದ್ದಿ, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ತರಬೇತಿ ಕೇಂದ್ರ ಉಪನ್ಯಾಸಕರಾದ ಕೃಷ್ಣ, ಕಲಿಕೆ ಟಾಟಾ ಟ್ರಸ್ಟ್ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರಾದ ಅಶೋಕ್, ಹಿರಿಯ ಮೇಲ್ವಿಚಾರಕಿಯರಾದ ಜಯಶ್ರೀ ಕೂಲಿ, ಮೇಲ್ವಿಚಾರಕಿಯರಾದ ಭುವನೇಶ್ವರಿ ಹಾಗೂ ಕಮಲಾಕ್ಷಿ ಸೇರಿದಂತೆ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ತರಬೇತಿಯಲ್ಲಿ 23 ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!