WhatsApp Image 2024-10-29 at 6.36.22 PM (1)

ಮಹಿಳೆಯರ ಸಬಲೀಕರಣಕ್ಕೆ ಸಂಜೀವಿನಿ ಸ್ವ ಸಹಾಯ ಸಂಘ ಸಹಕಾರಿ : ರವಿಕುಮಾರ ಅಯೋಧ್ಯ

ಕರುನಾಡ ಬವೆಳಗು ಸುದ್ದಿ

ಕೊಪ್ಪಳ, 29- ದೀಪ ಸಂಜೀವಿನಿ ಕಾರ್ಯಕ್ರಮಕ್ಕೆ ತಾಲೂಕು ಪಂಚಾಯತನ ಲೆಕ್ಕಾಧಿಕಾರಿ ರವಿಕುಮಾರ ಅಯೋಧ್ಯ ಚಾಲನೆ ನೀಡಿದರು.

ದೀಪಾವಳಿ ಹಬ್ಬದ ಪ್ರಯುಕ್ತ ಸಂಜೀವಿನಿ – ಎನ್.ಆರ್.ಎಲ್.ಎಂ ಯೋಜನೆಯಡಿ ಆಯೋಜಿಸಿದ್ದ ಕೊಪ್ಪಳ ನಗರದ ತಾಲೂಕ ಪಂಚಾಯತ್ ಮುಂಭಾಗದಲ್ಲಿ ಆಯೋಜನೆ ಮಾಡಲಾದ ” ದೀಪ ಸಂಜೀವಿನಿ ಸ್ಟಾಲ್ ಗಳ ಕಾರ್ಯಕ್ರಮವನ್ನು ರಿಬ್ಬನ್ ಕಟ್ ಮಾಡುವ ಹಾಗೂ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸದರಿ ದೀಪ ಸಂಜೀವಿನಿ‌ ಕಾರ್ಯಕ್ರಮದಿಂದ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಉತ್ತನ ವೇದಿಕೆ ಕಲ್ಪಿಸುವ ಜೊತೆಗೆ ಆದಾಯವನ್ನು ಹೆಚ್ಚಿಸಿದಂತಾಗಿದೆ. ಇದರಿಂದ‌ ಮಹಿಳೆಯರ ಸಬಲೀಕರಣ ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಸದರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತಾಲೂಕ ಪಂಚಾಯತನ ಸಹಾಯಕ ನಿರ್ದೇಶಕರಾದ ಶ್ರೀಯುತ ಮಹೇಶ್ ಎಚ್, ರವರು ಸದರಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರಾಗಲು ಸಂಜೀವಿನಿ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಬೆಳಕಿನ ಹಬ್ಬವೇ ದೀಪಾವಳಿ, ಸ್ವ ಸಹಾಯ ಸಂಘಗಳ ಮಹಿಳೆಯರು ತಮ್ಮ ಕೈ ಚಳಕ, ಪರಿಶ್ರಮ ಹಾಗೂ ಸೃಜನಶೀಲತೆಯಿಂದ ವಿವಿಧ ಆಕರ್ಷಕ ದೀಪಗಳನ್ನು ತಯಾರಿಸಿದ್ದಾರೆ. ಅವರಿಗೆ ಮಾರುಕಟ್ಟೆ ಒದಗಿಸುವುದು, ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸುವ ಮೂಲಕ ಅವರ ಸ್ವಾವಲಂಬಿ ನಡೆಗಳನ್ನು ಪ್ರೆರೇಪಿಸುವುದೇ ಮುಖ್ಯ ಉದ್ದೇಶವಾಗಿದೆ’ ಎಂದು ಹೇಳಿದರು.

ಸದರಿ ಕಾರ್ಯಕ್ರಮದಲ್ಲಿ ಮಹಿಳೆಯರೇ ತಯಾರಿಸಿದ ವಿವಿಧ ಉತ್ಪನ್ನಗಳಾದ ಸಿಹಿ ತಿನಿಸುಗಳು, ಬಟ್ಟೆ ವ್ಯಾಪಾರ, ಬಳೆ ವ್ಯಾಪಾರ, ಖಾರದ ಪುಡಿ ವ್ಯಾಪಾರ, ಕಸೂತಿ ಸೇರಿದಂತೆ ಕರಕುಶಲ ವಸ್ತುಗಳು ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಆಕರ್ಷಕ ದೀಪಗಳನ್ನು ಸದರಿ ಕಾರ್ಯಕ್ರಮದಲ್ಲಿ ಇಡಲಾಗಿತ್ತು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ನ ವ್ಯವಸ್ಥಾಪಕರಾದ ಶ್ರೀಯುತ ಬಸವರಾಜ್ ಪಾಟೀಲ್, ತಾಲೂಕ ಯೋಜನಾಧಿಕಾರಿಗಳಾದ ಶ್ರೀಯುತ ರಾಜೆಸಾಬ್ ನದಾಫ್, ಪ್ರಥಮ ದರ್ಜೆ ಸಹಾಯಕರಾದ ಕಿರಣ್ ಕುಮಾರ್, ವಿಷಯ‌ ನಿರ್ವಾಹಕರಾದ ಶ್ರೀಮತಿ ಲಲಿತ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಕೃಷ್ಣ , ಎನ್.ಆರ್.ಎಲ್.ಎಂ ಯೋಜನೆಯ ಜಿಲ್ಲಾ ವ್ಯವಸ್ಥಾಪಕರಾದ , ಜಾಕೀರ್ ಹುಸೇನ್, ವೆಂಕೋಬ ಡಿ, ಮತ್ತು ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕರಾದ ಸುನೀಲ್, SVEP ಯೋಜನೆ ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕರಾದ ನವೀನ್ ಕುಮಾರ್ ಶಿಳ್ಳಿನ್, ವಲಯ ಮೇಲ್ವಿಚಾರಕರಾದ ವೆಂಕಪ್ಪ ಶೀಗನಹಳ್ಳಿ, ಕೃಷಿ ಫಾರಂ ಕಾವ್ಯಶ್ರೀ , ಕಂಪ್ಯೂಟರ್ ಆಪರೇಟರ್ ನವೀನ್ ಅಗಡಿ, ಬಿ.ಆರ್.ಪಿ.- ಇ.ಪಿ ಸವಿತಾ, ಶ್ರೀದೇವಿ, ಸ್ವಸಹಾಯ ಸಂಘದ ಮಹಿಳೆಯರು, ಎಲ್.ಸಿ.ಆರ್.ಪಿ, ಗಳು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!