ನರೇಗಾ ಡಿಜಿಟಲ್ ಕ್ಯೂಆರ್ ಕೋಡ್ ಸ್ಕಾö್ಯನ್ ಮಾಡಿ ಕಾಮಗಾರಿ ಬೇಡಿಕೆ ಸಲ್ಲಿಸಿ : ಹನಮಂತಗೌಡ
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ, 18- ಪ್ರತಿ ಗ್ರಾಮಗಳ ರೈತರು.ಯುವಕರು ನೇರಗಾ ಕಾಮಗಾರಿಯನ್ನು ಕ್ಯೊಆರ್ ಕೊಡ್ ಸ್ಕಾö್ಯನ್ ಮಾಡಿ ಅರ್ಜಿ ಸಲ್ಲಿಸಬಹುದು ಉದ್ಯೋಗ ಖಾತ್ರಿ ನೆಡಿಗೆ ಸಬಲತೆ ಅಭಿಯಾನ ಕಡೆ ಎಂದು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಹನುಮಂತಗೌಡ ಪೋಲಿಸ್ ಪಾಟೀಲ ಹೇಳಿದರು.
ತಾಲೂಕಿನ ಹಿರೇಅರಳಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ೨೦೨೫-೨೬ನೇ ಸಾಲಿನ ಕಾರ್ಮಿಕ ಆಯವ್ಯಯ (ಕ್ರಿಯಾ ಯೋಜನೆ) ತಯಾರಿಕೆಯ ಉದ್ಯೋಗ ಖಾತ್ರಿ ನಡಿಗೆ ಸಬಲತೆಯಡೆಗೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಅಕ್ಟೋಬರ್-೨ ರಿಂದ ಕ್ರಿಯಾ ಯೋಜನೆ ತಯಾರಿಕೆ ಪ್ರಕ್ರಿಯೇ ಪ್ರಾರಂಭವಾಗಿದ್ದು, ಅದರಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮತ್ತು ಗ್ರಾಮಸ್ಥರು, ರೈತರು ನರೇಗಾ ಕಾಮಗಾರಿ ಬೇಡಿಕೆಯನ್ನು ಕ್ಯೂಆರ್ ಕೋಡ್ ಸ್ಕಾನ್ ಮಾಡಿ ಅರ್ಜಿ ಸಲ್ಲಿಸಬಹುದು. ಈ ಬಾರಿ ಡಿಜಿಟಲ್ ತಂತ್ರಜ್ಞಾನ ಅಳವಡಿಸಿದ್ದು, ರೈತರು, ಯುವಕರು ತಮ್ಮ ಮೊಬೈಲ್ ಮೂಲಕವೇ ಅರ್ಜಿಗಳನ್ನು ಸಲ್ಲಿಸಬಹುದು. ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಈ ಕಾಮಗಾರಿಯನ್ನು ಫಲಾನುಭವಿಗಳು ತಮ್ಮ ಮೊಬೈಲ್ ನಲ್ಲಿಯೇ ಅರ್ಜಿ ಸಲ್ಲಿಸಬಹುದು. ಇದರಿಂದ ಫಲಾನುಭವಿ ನೇರವಾಗಿ ಅರ್ಜಿ ಸಲ್ಲಿಸುವುದರಿಂದ ಮಧ್ಯವರ್ತಿಗಳ ಇಲ್ಲದೇ ಕಾಮಗಾರಿ ಕ್ರಿಯಾ ಯೋಜನೆಯಾಗುತ್ತದೆ ಈ ಎಲ್ಲಾ ಕಾಮಗಾರಿಗಳನ್ನು ಸಂಗ್ರಹಿಸಿ ಆಧ್ಯತಾ ಪಟ್ಟಿ ತಯಾರಿಸಿ ಗ್ರಾಮ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗುತ್ತದೆ. ಇದರಿಂದಾಗಿ ನೈಜ ಫಲಾನುಭವಿಗಳಿಗೆ ಅವಕಾಶ ಸಿಗುವಂತಾಗಿದೆ ಎಂದರು.
ಗ್ರಾ.ಪA ಪಿಡಿಒ ಸೋಮಪ್ಪ ಪೂಜಾರ್ ಮಾತನಾಡಿ, ಅಕ್ಟೋಬರ್ ತಿಂಗಳಾAತ್ಯದವರೆಗೆ ವಿಶೇಷ ಐಇಸಿ ಅಭಿಯಾನದಡಿಯಲ್ಲಿ ಮನೆ ಮನೆ ಭೇಟಿ ಮಾಡಿ ಕಾಮಗಾರಿ ಬೇಡಿಕೆ ಪೆಟ್ಟಿಗೆಯಲ್ಲಿ ಕಾಮಗಾರಿಗಳನ್ನು ಸಂಗ್ರಸಲಾಗುತ್ತಿದ್ದು, ನರೇಗಾ ಫಲಾನುಭವಿಗಳು ಕಾಮಗಾರಿಗಳ ಅರ್ಜಿಗಳನ್ನು ಪೆಟ್ಟಿಗೆಯಲ್ಲಿ ಹಾಕಬಹುದು. ಸದರಿ ಕಾಮಗಾರಿಗಳನ್ನು ತಾಂತ್ರಿಕ ಸಂಯೋಜಕರು ಪೂರ್ವಭಾವಿಯಾಗಿ ವೀಕ್ಷಣೆ ಮಾಡಿ ಅಂದಾಜು ಪತ್ರಿಕೆ ತಯಾರಿಸುತ್ತಾರೆ. ಅದೇ ಕಾಮಗಾರಿಯನ್ನು ಕ್ರಿಯಾ ಯೋಜನೆಯಲ್ಲಿ ಇಡುವುದರಿಂದ ಎಲ್ಲಾ ಕಾಮಗಾರಿಗಳು ಕಡ್ಡಾಯವಾಗಿ ಅನುಷ್ಠಾನ ಮಾಡಬಹುದು ಎಂದರು.
ಕಾರ್ಯಕ್ರಮದಲ್ಲಿ ತಾಲೂಕ ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ ಅವರು ಗ್ರಾಮದ ಯುವಕರ ಮೋಬೈಲ್ನಲ್ಲಿ ಸ್ಕಾö್ಯನ್ ಮಾಡಿಸಿ ಅರ್ಜಿ ಸಲ್ಲಿಸುವ ಮಾಹಿತಿ ತಿಳಿಸಿಕೊಟ್ಟರು.
ಸ್ಥಳದಲ್ಲಿ 10 ಜನರಿಂದ ಅರ್ಜಿ ಹಾಕಿಸಲಾಯಿತು.
ತಾಂತ್ರಿಕ ಸಹಾಯಕ ಸಂಗಮೇಶ, ಕರವಸೂಲಿಗಾರರಾದ ಗಂಗಮ್ಮ, ಡಿಇಒ ಶೇಖರ್, ಕಾಯಕ ಮಿತ್ರರಾದ ಶಾಂತಮ್ಮ, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಮತ್ತು ಇತರರು ಭಾಗವಹಿಸಿದ್ದರು.
