
ಕರವೇ ಶಿವರಾಮೇಗೌಡ ಬಣದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಮತ್ತು ಸೇರ್ಪಡೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 29- ಕರ್ನಾಟಕ ರಕ್ಷಣಾ ವೇದಿಕೆಯ (ಶಿವರಾಮೇಗೌಡಬಣ) ಜಿಲ್ಲಾ ಉಪಾಧ್ಯಕ್ಷರಾಗಿ ಡೇವಿಡ್, ಜಿಲ್ಲಾ ಕಾರ್ಯದರ್ಶಿಯನ್ನಾಗಿ ಜಡೇಗೌಡ ಇವರನ್ನು ನೇಮಕ ಮಾಡಲಾಗಿದೆ ಎಂದು ವೇದಿಕೆಯ ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯ ಜಿಲ್ಲಾಧ್ಯಕ್ಷ ರಾಜಶೇಖರ್ (ಕುರಿಹಟ್ಟಿ ರಾಜಣ್ಣ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರದ ವೇದಿಕೆಯ ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೇಲ್ಕಂಡ ಜಿಲ್ಲಾ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಪತ್ರವನ್ನು ನೀಡಿ, ವೇದಿಕೆಯ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಿ ಸಂಘಟನೆಯನ್ನು ಬಲಪಡಿಸಲು ಶ್ರಮಿಸಬೇಕೆಂದು ಹೊಸದಾಗಿ ನೇಮಕಗೊಂಡ ಜಿಲ್ಲಾ ಪದಾಧಿಕಾರಿಗಳಿಗೆ ಮತ್ತು ಕಾರ್ಯಕರ್ತರಿಗೆ ಸೂಚಿಸಿದರು.
ನೇಮಕಾತಿ ಆದೇಶ ಪತ್ರವನ್ನು ಪಡೆದ ಡೇವಿಡ್ ಮತ್ತು ಜಡೇಗೌಡ ಮಾತನಾಡಿ, ನಮ್ಮ ಮೇಲೆ ವಿಶ್ವಾಸ ಇಟ್ಟು ಜಿಲ್ಲಾಧ್ಯಕ್ಷರಾದ ರಾಜಣ್ಣ ನಮ್ಮನ್ನು ಸಂಘಟನೆಯ ಜಿಲ್ಲಾ ಪದಾಧಿಕಾರಿಗಳನ್ನಾಗಿ ನೇಮಕ ಮಾಡಿದ್ದಾರೆ ಅವರ ನಂಬಿಕೆಗೆ ಮತ್ತು ವಿಶ್ವಾಸಕ್ಕೆ ಚುತಿ ತರದಂತೆ ಕನ್ನಡಪರ ಕೆಲಸವನ್ನು ಮಾಡುತ್ತಾ ವೇದಿಕೆಯನ್ನು ಜಿಲ್ಲಾಧ್ಯಂತ ಸಂಘಟನೆ ಮಾಡುವ ಮೂಲಕ ಹಾಗೂ ನಾಡು ನುಡಿಯ ಸೇವೆ ಮಾಡುತ್ತಾ ಸಂಘಟನೆಯನ್ನು ಬಲಪಡಿಸಲು ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೋಳೂರು, ಕುರುಗೋಡು, ಬೈಲೂರು, ಬಾಣಾಪುರ, ಕೌಲ್ ಬಜಾರ್, ಈಶ್ವರ ಗುಡಿ ಸೇರಿದಂತೆ ಇತರ ಪ್ರದೇಶಗಳ ಕನ್ನಡ ಅಭಿಮಾನಿಗಳು ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಸಂಘಟನೆಗೆ ಸೇರ್ಪಡೆಗೊಂಡರು ಎಂದು ರಾಜಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಪದಾಧಿಕಾರಿ ಕಟಗಿ ಸೂರಿ ಸೇರಿದಂತೆ ಹಲವಾರು ಕನ್ನಡ ಕಾರ್ಯಕರ್ತರಿದ್ದರು.