
ರಾಜೀವ ಗಾಂದಿ ಅರೋಗ್ಯ ವಿಶ್ವವಿದ್ಯಾಲಯದ ರಾಷ್ಟಿಯ ಸೇವಾ ಯೋಜನಾ ತಂಡಕ್ಕೆ ಆಯ್ಕೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 18- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಹಾಸನದಲ್ಲಿ ನಡೆದ ರಾಜ್ಯ ಮಟ್ಟದ ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರ ಆಯ್ಕೆ ಪ್ರಕ್ರಿಯೆಯಲ್ಲಿ ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕಿಯಾದ ದ್ವಿತೀಯ ವರ್ಷದ ಕುಮಾರಿ ಶ್ರೇಯಾ ಸವಣೂರು, ಪ್ರತಿಷ್ಟಿತ ರಾಜೀವ ಗಾಂಧಿ ಅರೋಗ್ಯ ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ ತಂಡಕ್ಕೆ ಆಯ್ಕೆಯಾಗಿದ್ದಾಳೆ ಎಂದು ಎಸ್‌ಜಿವಿವಿ ಟ್ರಸ್ಟಿನ ಸದಸ್ಯರು ಮತ್ತುಆಯುರ್ವೇದ ಮಹಾವಿದ್ಯಾಲಯದ ಅಧ್ಯಕ್ಷ ಸಂಜಯ ಕೊತಬಾಳ ತಿಳಿಸಿದರು.
ಮಹಾವಿದ್ಯಾಲಯದಲ್ಲಿ ಕುಮಾರಿ ಶ್ರೇಯಾಳ ಸಾಧನೆಯನ್ನು ಪ್ರಶಂಸಿಸುತ್ತಾ ಮಾತನಾಡಿದ ಅವರು ಕುಮಾರಿ ಶ್ರೇಯಾ ದಿನಾಂಕ ೧೫ ಮತ್ತು ೧೬ ಅಕ್ಟೋಬರನಂದು ನಡೆಯಲಿರುವ ದಕ್ಷಿಣ ವಲಯ ಮಟ್ಟದ ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರ ಆಯ್ಕೆ ಪ್ರಕ್ರಿಯೆಯಲ್ಲಿ ರಾಜೀವ ಗಾಂಧಿ ಅರೋಗ್ಯ ವಿಶ್ವವಿದ್ಯಾಲಯ ಮತ್ತು ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯವನ್ನು ಪ್ರತಿನಿದಿಸುತ್ತಿರುವುದು ಹೆಮ್ಮೆಯ ವಿಷಯವಾಗಿದ್ದು, ಈ ಪ್ರಕ್ರಿಯೆಯಲ್ಲಿ ಅತ್ಯುತ್ತಮ ಸಾಧನೆ ತೋರಿ ರಾಷ್ಟ್ರ ಮಟ್ಟದ ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ಆಯ್ಕೆಯಾಗಿ ರಾಜೀವ ಗಾಂಧಿ ಅರೋಗ್ಯ ವಿಶ್ವವಿದ್ಯಾಲಯ ಮತ್ತು ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದ ಕೀರ್ತಿಯನ್ನು ಬೆಳಗಲಿ ಎಂದು ಶುಭ ಹಾರೈಸಿದರು.
ಸಂಸ್ಥೆಯ ಪ್ರಾಚಾರ್ಯ ಡಾ.ಮಹಾಂತೇಶ ಸಾಲಿಮಠ ಮಾತನಾಡಿ, ವಿದ್ಯಾರ್ಥಿನಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿ ಆಯ್ಕೆ ಪ್ರಕ್ರಿಯೆಯಲ್ಲಿ ಸುಮಾರು ೬೦ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದು ಅದರಲ್ಲಿ ತಮ್ಮ ಪ್ರತಿಭೆಯ ಮೂಲಕ ರಾಜೀವ ಗಾಂಧಿ ಅರೋಗ್ಯ ವಿಶ್ವವಿದ್ಯಾಲಯ ತಂಡಕ್ಕೆ ಆಯ್ಕೆಯಾಗಿರುವುದು ಅತಿ ಹೆಮ್ಮೆಯ ವಿಷಯ ಮುಂಬರುವ ದಿನಗಳಲ್ಲಿ ಇದೇತೆರನಾದ ಉತ್ತಮ ಸಾಧನೆಗಳು ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಹೊರಹೊಮ್ಮಲಿ ಎಂದು ಶುಭಾಶಯ ಕೋರಿದರು.
ಕುಮಾರಿ ಶ್ರೇಯಾಳ ಸಾಧನೆಗೆ ಉಪಪ್ರಾಚಾರ್ಯ ಸುರೇಶ ಹಕ್ಕಂಡಿ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಡಾ.ಶಾಂತವೀರ ಶಿರೂರಮಠ, ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಶುಭ ಕೋರಿದರು.