
ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ : ಶ್ರೀರಾಮುಲು
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 27-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದ ವಿಷಯವಾಗಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಪಾರದರ್ಶಕ ತನಿಖೆಗೆ ಸಹಕರಿಸಬೇಕು’ ಎಂದು ಬಿಜೆಪಿಯ ಮಾಜಿ ಸಚಿವ ಶ್ರೀರಾಮುಲು ಒತ್ತಾಯಿಸಿದರು.
ನಗರದ ವಾಜಪೇಯಿ ಬಡಾವಣೆಯಲ್ಲಿರುವ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಡಾ ಪ್ರಕರಣಕ್ಕೆ ಸಂಬAಧಿಸಿದAತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿರುದ್ಧದ ಪ್ರಾಸಿಕ್ಯೂಷನ್ ವಿಚಾರಣೆಗೆ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದರಿಂದ, ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿ ಶ್ರೀರಾಮುಲು ಆಗ್ರಹಿಸಿದರು.
ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಅವರ ಅನುಮತಿಯಂತೆ ಲೋಕಾಯುಕ್ತರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುವ ಸಂದರ್ಭದಲ್ಲಿ ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದರು, ಅಷ್ಟೇ ಅಲ್ಲದೆ ಆ ದಿನಗಳಲ್ಲಿ ವಿರೋಧ ಪಕ್ಷದ ನಾಯಕ ರಾಗಿದ್ದ ಸಿದ್ದರಾಮಯ್ಯನವರು ಮಾನ ಮರ್ಯಾದೆ ಇದ್ದರೆ ಯಡಿಯೂರಪ್ಪ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದ್ದರು, ಈಗಲೂ ಕೂಡ ಸಿದ್ದರಾಮಯ್ಯನವರಿಗೆ ಅದೇ ಮಾತು ಅನ್ವಯಿಸುತ್ತದೆ ಎಂಬುದು ಹಿರಿಯ ರಾಜಕಾರಣಿಗಳಾದ ಸಿದ್ದರಾಮಯ್ಯ ತಿಳಿದುಕೊಂಡರೆ ಒಳಿತು ಎಂದು ಅಭಿಪ್ರಾಯಪಟ್ಟರು.
ಅದೇ ರೀತಿಯಾಗಿ ಸಿದ್ದರಾಮಯ್ಯ ಸಹ ಯಡಿಯೂರಪ್ಪ ಅವರಂತೆ ರಾಜೀನಾಮೆ ನೀಡಿ ಮಾದರಿನಡೆ ಅನುಸರಿಸಬೇಕು ಎಂದು ಶ್ರೀರಾಮುಲು ಒತ್ತಾಯಿಸಿದರು. ವಾಲ್ಮೀಕಿ ನಿಗಮದ ಹಣದಲ್ಲಿ ಚುನಾವಣೆ ನಡೆದಿದೆ ಎಂದು ನಾವು ಹೇಳುತ್ತಿಲ್ಲ. ಜಾರಿ ನಿರ್ದೆಶನಾಲಯ ತನ್ನದೋಷಾರೋಪ ಪಟ್ಟಿಯಲ್ಲಿ ಖಚಿತ ಪಡಿಸಿದೆ. ಇಷ್ಟಾದರೂ ತುಕಾರಾಂ ಮಾತನಾಡುತ್ತಿಲ್ಲ. ತುಕಾರಾಂ ನಾಲ್ಕು ಬಾರಿಗೆದ್ದು ಶಾಸಕರಾಗಿರಬಹುದು ಸಂಸದರಾಗಿರಬಹುದು, ಸಂತೋಷ ಲಾಡ್ ಅವರ ಕೃಪಕಾಟಕ್ಷದಿಂದಲೇ ಅವರು ಗೆದ್ದಿದ್ದಾರೆ ವಿನಃ ಸ್ವಂತ ಬಲದಿಂದ ಗೆಲ್ಲುವ ಶಕ್ತಿ ಅವರಿಗಿಲ್ಲ ಎಂದು ಕುಟುಕಿದರೂ. ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಕಿಂಗ್ ಪಿನ್ ಆಗಿದ್ದಾರೆ ಎಂದು ಆರೋಪಿಸಿದ ಶ್ರೀರಾಮುಲು, ಎಸ್‌ಟಿ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನು ಚುನಾವಣೆಗೆ ಬಳಸಿದ್ದಾರೆ ಎಂದರೆ ನಿಜಕ್ಕೂ ಇದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.
ಅವರು ತುಕರಾಂ ಗೆಲುವಿಗೆ ಹಣ ಬಳಸಿದ್ದರ ವಿರುದ್ಧ ಕೋರ್ಟ್ನಲ್ಲಿದಾವೆ ಹೂಡುವ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸುತ್ತಿದ್ದೇನೆ ಎಂದು ಇದೇ ಸಂದರ್ಭದಲ್ಲಿ ಶ್ರೀರಾಮುಲು ತಿಳಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ನಾಯ್ಡು ಮೋಕ, ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಓಬಳೇಶ್, ಕಚೇರಿ ಸಹ ಕಾರ್ಯದರ್ಶಿ ಕೆ.ಆರ್.ಮಲ್ಲೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.