WhatsApp Image 2024-07-26 at 6.06.04 PM

ಸಾಧನೆ ಹಾದಿಗೆ ಕೌಶಲ್ಯ ಮುಖ್ಯ :  ಎ.ಆರ್.ಶಿವಾನಂದ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 26- ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಬಿದ್ದು ಜೀವನವನ್ನೆ ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜಾಗೃತರಾಗಿ ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಗ್ರಾಮಕ್ಕೆ ಕೀರ್ತಿ ತರುವ ಕೆಲಸ ಮಾಡಿ ಎಂದು ಕೊಪ್ಪಳದ ಬಾಲಕಿಯರ ಪಿಯು ಕಾಲೇಜು ಪ್ರಾಚಾರ್ಯ ಎ.ಆರ್. ಶಿವಾನಂದ ಹೇಳಿದರು.

ತಾಲೂಕಿನ ಹಲಗೇರಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳೆವಣಿಗೆಗೆ ಉಪನ್ಯಾಸಕರು ಹಾಗೂ ಪೋಷಕರ ಜವಾಬ್ದಾರಿ ಮಹತ್ವದ್ದಾಗಿದೆ. ಈ‌ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡಿ, ಇದರಿಂದ ಅವರ ವ್ಯಕ್ತಿತ್ವ ವಿಕಸನ ಹಾಗೂ ಮಾನವೀಯ ಮೌಲ್ಯಗಳು ವೃದ್ಧಿಯಾಗಲು ಸಹಕಾರಿಯಾಗಲಿದೆ ಎಂದು ಹೇಳಿದರು.

‘ಮಕ್ಕಳಲ್ಲಿ ಉತ್ತಮ ಗುಣಗಳನ್ನು ಬಾಲ್ಯದಿಂದಲೇ ಬೆಳೆಸುವುದರಿಂದ ಭವಿಷ್ಯದಲ್ಲಿ ಅವರು ಉತ್ತಮ ಪ್ರಜೆ ಗಳಾಗುವರು. ಇದನ್ನು ಮನಗಂಡು ಪೋಷಕರು ಮತ್ತು ಉಪನ್ಯಾಸಕರು ವಿದ್ಯಾರ್ಥಿ ಗಳಲ್ಲಿ ಮೌಲ್ಯಗಳನ್ನು ಬಿತ್ತಬೇಕು. ವಿದ್ಯಾರ್ಥಿಗಳು ತಮ್ಮಲ್ಲಿನ ನ್ಯೂನತೆ ಬದಿಗೊತ್ತಿ ಸಾಧನೆಯ ಹಾದಿಗೆ ಅವಶ್ಯ ಇರುವ ವಿವಿಧ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಹಲಗೇರಿಯ ಸರ್ಕಾರಿ ಪ್ರೌಢಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ವರುಣ್ ಕುಮಾರ್ ನಿಟ್ಟಾಲಿ ಮಾತನಾಡಿ, ಆಧುನಿಕ ಜಗತ್ತು ಇಂದು ಅಂಗೈ ಅಗಲದಲ್ಲಿದೆ. ಎಲ್ಲ ಕ್ಷೇತ್ರದಲ್ಲೂ ತೀವ್ರ ಸ್ಪರ್ಧೆ ಇದೆ. ವಿದ್ಯಾರ್ಥಿಗಳು ಕೇವಲ ಪಠ್ಯಗೆ ಮಾತ್ರ ಸೀಮಿತವಾಗಿದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇಂದಿನಿಂದಲೇ ಅಣಿಗೊಳ್ಳಬೇಕು ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಇದರಿಂದ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಸಾಧ್ಯ’ ಎಂದರು.

ಹಲಗೇರಿ ಪಿಯು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಹನುಮಂತ ಹಳ್ಳಿಕೇರಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಚಿತ್ರನಟರನ್ನು ತಮ್ಮ ಹಿರೋಗಳೆಂದು ಭಾವಿಸಿ ವಿದ್ಯಾರ್ಥಿ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ನೀವು ನಿಜವಾದ ಹಿರೋ ಎಂದರೆ ಬುದ್ದ, ಬಸವ ಮತ್ತು ಡಾ.ಅಂಬೇಡ್ಕ‌ರ್ ಅವರಂತ ನಾಯಕರನ್ನು ಮಾದರಿಯಾಗಿಟ್ಟುಕೊಂಡು ಅಭ್ಯಾಸ ಮಾಡಬೇಕು. ಅಂದಾಗ ಮಾತ್ರ ನೀವು ಸಮಾಜದಲ್ಲಿ ಉನ್ನತ ಸಾಧನೆ ಸಾಧಿಸಲು ಸಹಕಾರಿಯಾಗಲಿದೆ ಎಂದರು.

ಹಲಗೇರಿ ಪಿಯು ಕಾಲೇಜು ಪ್ರಾಚಾರ್ಯ ಕೃಷ್ಣರಾವ್ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡ ಕರಿಯಪ್ಪ ಹಳ್ಳಿಕೇರಿ, ಉಪನ್ಯಾಸಕರಾದ ವೀರೇಶ ಕಾತರಕಿ, ಶರಣಪ್ಪ ಮಾಗಳದ, ಈಶ್ವರಪ್ಪ ಸಿ., ಡಾ.ಸುಮತಿ, ಷರೀಫ್ ಬೇಗಂ, ಸಿದ್ದರೆಡ್ಡಿ ಮೇಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!