ಎಂ.ಜಿ ಕನಕಗೆ ಸಮಾಜ ಸೇವಾ ರತ್ನ ಪ್ರಶಸ್ತಿ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 30- ಸಮಾಜ ಸೇವಕ, ಧ್ರುವ ಸರ್ಜಾ ಅಭಿಮಾನಿಗಳ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷ ಹಾಗೂ ಅಹಿಂದ ಯುವ ಘಟಕದ ಬಳ್ಳಾರಿ ಜಿಲ್ಲಾಧ್ಯಕ್ಷ ಎಂ.ಜಿ ಕನಕ ಅವರಿಗೆ ‘ಸಮಾಜ ಸೇವಾ ರತ್ನ ಪ್ರಶಸ್ತಿ’ಯನ್ನು ಶಾಸಕ ನಾರಾ ಭರತ್ ರೆಡ್ಡಿ ನೀಡಿ ಗೌರವಿಸಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಈ ಪ್ರಶಸ್ತಿ ನೀಡಿದೆ.
ಸಮಾಜ ಸೇವಕ ಎಂ.ಜಿ ಕನಕ ತಮ್ಮ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿರುವ ಬಗ್ಗೆ ಕನಕ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತಿ ನ್ಯಾಯಾಧೀಶರು ಹಾಗೂ ಲೋಕಾಯುಕ್ತರಾಗಿದ್ದ ಸಂತೋಷ್ ಹೆಗಡೆ, ಕಲ್ಯಾಣ ಸ್ವಾಮೀಜಿ, ಮೇಯರ್ ಮುಲ್ಲಂಗಿ ನಂದೀಶ್, ಡಿಸಿಸಿ ಅಧ್ಯಕ್ಷ ಅಲ್ಲಂ ಪ್ರಶಾಂತ್, ಬಂಗ್ಲೆ ಮಲ್ಲಿಕಾರ್ಜುನ್, ಗಿರಿ ಯಾದವ್ ಹಾಗೂ ಪ್ರಭಾಕರ್ ಇದ್ದರು.