ಜನ ಜಾಗೃತಿ ಜಾಥ (6)

ವ್ಯಸನ ಮುಕ್ತ ದಿನಾಚರಣೆ ಜನ ಜಾಗೃತಿ ಜಾಥಾಕ್ಕೆ ಜಿಲ್ಲಾ ಆಯುಷ್ ಅಧಿಕಾರಿಗಳಿಂದ ಚಾಲನೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 1- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ವೈದ್ಯಕೀಯ ಶೀಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಪ್ಪಳ ಹಾಗೂ ಕೊಪ್ಪಳ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು ಮತ್ತು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಇವರ ಸಹಯೋಗದಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಹಾಗೂ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಆಗಸ್ಟ್.01ರಂದು ಹಮ್ಮಿಕೊಳ್ಳಲಾಗಿದ್ದ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಪಿ.ಬಿ.ಹಿರೇಗೌಡರ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳಾ ಎ.ಬಸವರಾಜ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ಪೂಜಾರ, ತಾಲ್ಲೂಕ ದೈಹಿಕ ಶಿಕ್ಷಣ ಪರಿವೀಕ್ಷಕರಾದ ವೀರನಗೌಡ ಬಿ ಗೌಡರ್ ಸೇರಿದಂತೆ ಕಾಲೇಜು ಉಪನ್ಯಾಸಕರು, ಪೊಲೀಸ್ ಸಿಬ್ಬಂದಿ, ವಾರ್ತಾ ಇಲಾಖೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಡಾ.ಮಹಾಂತ ಶಿವಯೋಗಿಗಳ ಜನ್ಮದಿನಕ್ಕೆ ವಿಶೇಷ ಜಾಗೃತಿ: ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಹಾಗೂ ವ್ಯಸನ ಮುಕ್ತ ದಿನಾಚರಣೆ ನಿಮಿತ್ತ ಜಿಲ್ಲಾಸ್ಪತ್ರೆ ಆವರಣದಿಂದ ಜಿಲ್ಲಾಡಳಿತ ಭವನದವರೆಗೆ ಏರ್ಪಡಿಸಲಾದ ಜನ ಜಾಗೃತಿ ಜಾಥಾದಲ್ಲಿ ಭಾಗ್ಯನಗರದ ನವಚೇತನ ಪಿಯು ಕಾಲೇಜು, ಹಾಗೂ ಜ್ಞಾನಬಂಧು ಪಿಯು ಕಾಲೇಜು, ಕೊಪ್ಪಳದ ಲಯನ್ಸ್ ಪಿಯು ಕಾಲೇಜು, ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ವಿದ್ಯಾರ್ಥಿಗಳು, ಉಪನ್ಯಾಸಕರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡು ಕೈಯಲ್ಲಿ ಜಾಗೃತಿ ಫಲಕಗಳನ್ನು ಹಿಡಿದು, ಘೋಷಣೆ ಕೂಗುವುದರ ಮೂಲಕ ವ್ಯಸನ ಮುಕ್ತ ಜೀವನಕ್ಕಾಗಿ ವಿಶೇಷ ಜಾಗೃತಿ ಮೂಡಿಸಿದರು.

Leave a Reply

Your email address will not be published. Required fields are marked *

error: Content is protected !!