ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 : ಡಿಸಿ ಮಿಶ್ರಾ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 30- ಭಾರತ ಚುನಾವಣಾ ಆಯೋಗವು ಅರ್ಹತಾ ೨೦೨೫ರ ಜ.೦೧ರ ಸಂಬAಧ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-೨೦೨೫ ರ ವೇಳಾಪಟ್ಟಿ ದಿನಾಂಕ ಹೊರಡಿಸಿದ್ದು, ತಿದ್ದುಪಡಿ, ವಿಳಾಸ ಬದಲಾವಣೆ, ವಿವಿಧ ನಮೂನೆಯ ಅರ್ಜಿ ಫಾರಂ ಸಲ್ಲಿಸಲು ಹಾಗೂ ಇನ್ನೂ ಹೆಚ್ಚು ಮತದಾರರ ನೋಂದಣಿಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಈಗಾಗಲೇ, ಅ.೨೯ ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿದೆ, ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.೨೮ ರವರೆಗೆ ಅವಧಿ ನಿಗದಿಪಡಿಸಿದೆ ಮತ್ತು ೨೦೨೫ ರ ಜ.೦೬ ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಿದೆ.

ವಿಶೇಷ ಅಭಿಯಾನ : ಹೆಸರು, ವಿಳಾಸ, ಭಾವಚಿತ್ರ ತಿದ್ದುಪಡಿ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಈ ಸಂಬAಧ ನವೆಂಬರ್ ೦೯, ೧೦ ಮತ್ತು ೨೩, ೨೪ ರಂದು ವಿಶೇಷ ಅಭಿಯಾನ ಕಾರ್ಯವನ್ನು ಹಮ್ಮಿಕೊಂಡಿದ್ದು, ಮೇಲಿನ ವೇಳಾಪಟ್ಟಿಯಂತೆ ಹಾಗೂ ವಿಶೇಷ ಅಭಿಯಾನಕ್ಕೆ ನಿಗದಿಪಡಿಸಿದ ದಿನಾಂಕಗಳAದು ಆಯಾ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು ಬೆಳಿಗ್ಗೆ ೧೦ ರಿಂದ ಸಂಜೆ ೦೫ ಗಂಟೆಯವರೆಗೆ ಹಾಜರಿರುತ್ತಾರೆ.

ಅರ್ಹತಾ ದಿನಾಂಕ ೨೦೨೫ ರ ಜ.೦೧ ಕ್ಕೆ ೧೮ ವರ್ಷ ಪೂರ್ಣಗೊಂಡ ಎಲ್ಲಾ ಅರ್ಹ ಮತದಾರರು ನಮೂನೆ-೬ ಅರ್ಜಿಯನ್ನು ನಿಗದಿಪಡಿಸಿದ ದಿನಗಳಂದು ಸಂಬAಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಅಥವಾ ತಾಲ್ಲೂಕು ಕಚೇರಿಯಲ್ಲಿ ಸಲ್ಲಿಸಬಹುದು. ಹೆಸರು, ವಿಳಾಸ, ಭಾವಚಿತ್ರ ತಿದ್ದುಪಡಿಗಾಗಿ ನಮೂನೆ-೮ ಅರ್ಜಿ ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು (ಮರಣ ಹೊಂದಿದ ಮತದಾರರ ಮನೆಯ ಸಂಬAಧಿಕರು) ನಮೂನೆ-೭ ಅರ್ಜಿಯನ್ನು ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.

ಅರ್ಹ ಮತದಾರರು ಹೆಚ್ಚಿನ ಆಸಕ್ತಿ ವಹಿಸಿ ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ ನೋಂದಾಯಿಸಿಕೊAಡು, ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!