
ಕ್ರೀಡೆಗಳು ಸದೃಢ ಆರೋಗ್ಯಕ್ಕೆ ಅವಶ್ಯ : ರಾಘವೇಂದ್ರ ಹಿಟ್ನಾಳ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 26- ಕ್ರೀಡೆಗಳು ಸದೃಢ ಆರೋಗ್ಯಕ್ಕೆ ಅತ್ಯವಶ್ಯವಾಗಿ ಬೇಕಾಗುತ್ತವೆ. ಸದಾ ಕ್ರೀಡೆ, ವ್ಯಾಯಾಮ ಚಟುವಟಿಕೆಗಳಿಂದ ಕೂಡಿರುವ ವಿದ್ಯಾರ್ಥಿಗಳು ಸದೃಢ ಆರೋಗ್ಯ ಮತ್ತು ಮಾನಸಿಕ ಸ್ಥಿಮಿತತೆಯನ್ನು ಕಾಪಾಡಿಕೊಳ್ಳುತ್ತಾರೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪೂಜ್ಯ ಶ್ರೀ ಮರಿಶಾಂತವೀರ ಸ್ವಾಮೀಜಿ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ನಡೆದ ೨೦೨೪-೨೫ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಭಾಗದಲ್ಲಿ ಇರುವ ವಿದ್ಯಾರ್ಥಿಗಳು ಅಂತರರಾಷ್ಟಿçÃಯ ಮಟ್ಟದಲ್ಲಿಯೂ ಸಹ ಭಾಗವಹಿಸುವ ಪ್ರತಿಭೆಯುಳ್ಳವರಾಗಿದ್ದಾರೆ. ಅವರು ಸದಾ ಪ್ರಯತ್ನಶೀಲರಾದರೆ ಅದು ಸಾಧ್ಯವಾಗಬಹುದೆಂದು ಅಭಿಪ್ರಾಯಪಟ್ಟರು.
ಮತ್ತೋರ್ವ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕರವರು ಇತ್ತೀಚಿನ ದಿನಮಾನಗಳಲ್ಲಿ ವಿದ್ಯಾರ್ಥಿನಿಯರು ಕ್ರೀಡೆಗಳಲ್ಲಿ ಹೆಚ್ಚು-ಹೆಚ್ಚು ಭಾಗವಹಿಸುವಿಕೆ ಕಂಡುಬರುತ್ತಿರುವುದು ಸಂತಸದ ಸಂಗತಿ. ಮೊನ್ನೆ ನಡೆದ ಓಲಂಪಿಕ್ಸ್ ಸ್ಪರ್ಧೆಯಲ್ಲಿ ಮಹಿಳೆಯರು ಶೂಟಿಂಗ್ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತಕ್ಕೆ ಕಂಚು ಗೆದ್ದುಕೊಟ್ಟಿದ್ದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಪ್ರಾಚಾರ್ಯರಾದ ರಾಜಶೇಖರ ಪಾಟೀಲರವರು ವಹಿಸಿಕೊಂಡು ಮಾತನಾಡುತ್ತಾ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಎಲ್ಲಾ ವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷ ಅನೀಲಕುಮಾರ ಜಿ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಸೋಮಶೇಖರಗೌಡ, ಕಾರ್ಯಧ್ಯಕ್ಷ ಮಾರುತಿ ಲಕಮಾಪುರ, ಖಜಾಂಚಿ ಸಂಜಯ ಬಡಿಗೇರ, ಪ್ರಾಚಾರ್ಯ ಟಿ.ಸಿ ಶಾಂತಪ್ಪ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಬಸವರಾಜ ಎ, ಪತ್ರಕರ್ತ ಹನುಮಂತ ಹಳ್ಳಿಕೇರಿ, ಸಮಾಜ ಸೇವಕ ಶರಣಪ್ಪ ಸಜ್ಜನ್, ಪ್ರಾಚಾರ್ಯರುಗಳಾದ ಡಾ.ವೀರೇಶಕುಮಾರ ಎನ್.ಎಸ್ ಮತ್ತು ಅಗಸ್ಟಿನ್ ಎಸ್, ಕಾಲೇಜಿನ ಶೈಕ್ಷಣಿಕ ಸಂಯೋಜಕ ಶರಣಪ್ಪ ಎ.ಜಿ, ಹಿರಿಯ ಉಪನ್ಯಾಸಕ ರಾಚಪ್ಪ ಕೇಸರಭಾವಿ, ಜಿಲ್ಲಾ ಕ್ರೀಡಾ ಸಂಚಾಲಕ ತಿರುಪತಿ ನಾಯಕ ಹಾಗೂ ಕ್ರೀಡಾ ಸಂಘಟಕ ಈಶಪ್ಪ ದೊಡ್ಡಮನಿ ಮುಂತಾದವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದ ಪ್ರಾರಂಭದಲ್ಲಿ ಉಪನ್ಯಾಸಕ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಡಾ.ಮಂಜುನಾಥ ಬಡಿಗೇರ ಸ್ವಾಗತಿಸಿದರೆ, ಕೊನೆಗೆ ಹನುಮೇಶ ಚೌಡ್ಕಿ ವಂದಿಸಿದರು. ಅಶೋಕ ಓಜಿನಹಳ್ಳಿ ಈ ಕಾರ್ಯಕ್ರಮವನ್ನು ನಿರ್ವಹಿಸಿದರು.
ಈ ಕ್ರೀಡಾಕೂಟದಲ್ಲಿ ಜಿಲ್ಲೆಯ ಏಳು ತಾಲೂಕಿನ ಪದವಿ ಪೂರ್ವ ಕಾಲೇಜುಗಳ ಸುಮಾರು ೨೦೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಸೆ.೨೬ರಂದು ವಿದ್ಯಾರ್ಥಿನಿಯರಿಗೆ, ಸೆ.೨೭ರಂದು ವಿದ್ಯಾರ್ಥಿಗಳಿಗೆ ಮತ್ತು ಸೆ.೨೮ರಂದು ವಿಶೇಷ ಪಂದ್ಯಾಟಗಳನ್ನು ನಡೆಸಲಾಗುತ್ತದೆ.