
oppo_1024
ಜನತೆಗೆ ಗ್ಯಾರಂಟಿ ಯೋಜನೆಗಳ ಮಹತ್ವ ತಿಳಿಸಿ : ಎಸ್.ಆರ್.ಮೆಹರೋಜ್ ಖಾನ್
ಕರುನಾಡ ಬೆಳಗುಇ ಸುದ್ದಿ
ವಿಜಯನಗರ, 29- ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಸಂಬಂಧ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಕಲಬುರಗಿ ವಿಭಾಗದ ಉಪಾಧ್ಯಕ್ಷರಾದ ಎಸ್.ಆರ್. ಮೆಹರೋಜ್ ಖಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು ವಿವಿಧ ಗ್ಯಾರಂಟಿ ಯೋಜನೆಗಳ ಪ್ರಗತಿಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಗೃಹಲಕ್ಷ್ಮಿ ಯೋಜನೆಯಡಿ ವಿಜಯನಗರ ಜಿಲ್ಲೆಯ ಅರ್ಹ ಯಜಮಾನಿ ಮಹಿಳೆಯರಿಗೆ 2000 ರೂ. ಧನ ಸಹಾಯ ಪಾವತಿ ಮಾಡುತ್ತಿದ್ದು, 2023ರ ಆಗಸ್ಟ್ 23ರಿಂದ 2024ರ ಜೂನ್ ಮಾಹೆವರೆಗೆ 582,58,80,000 ರೂ ಪಾವತಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ಶ್ವೇತಾ ಅವರು ಸಭೆಗೆ ಮಾಹಿತಿ ನೀಡಿದರು.
ಗೃಹಜ್ಯೋತಿ ಯೋಜನೆಯಡಿ ವಿಜಯನಗರ ಜಿಲ್ಲೆಯಲ್ಲಿ 2024ರ ಜುಲೈ ಅಂತ್ಯಕ್ಕೆ ಡಿಬಿಟಿ ಮೂಲಕ 133.59 ಕೋಟಿ ರೂ.ಗಳನ್ನು ಪಾವತಿಸಲಾಗಿದೆ ಎಂದು ಜೆಸ್ಕಾಂನ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಯುವನಿಧಿ ಯೋಜನೆಯಡಿ ಜನವರಿ 2024ರಿಂದ ಜುಲೈ 24ರವರೆಗೆ 6643 ಪದವೀಧರರಿಗೆ ತಿಂಗಳಿಗೆ 3000 ರೂ.ರಂತೆ ಹಾಗೂ 61 ಡಿಪ್ಲೋಮಾ ವಿದ್ಯಾರ್ಥಿಗಳಿಗೆ ತಿಂಗಳಿಗೆ ರೂ.1500 ರೂನಂತೆ ಒಟ್ಟು 6074 ವಿದ್ಯಾರ್ಥಿಗಳಿಗೆ ರೂ.2,00,20,500 ರೂ.ಗಳನ್ನು ಪಾವತಿಸಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಯೋಜನಾಧಿಕಾರಿ ಪಿ.ಎಸ್.ಅಟ್ಟಪ್ಪ ಅವರು ಮಾಹಿತಿ ನೀಡಿದರು.
ಅನ್ನಭಾಗ್ಯ ಯೋಜನೆಯಡಿ ವಿಜಯನಗರ ಜಿಲ್ಲೆಯಲ್ಲಿ 2023ರ ಜುಲೈ 2023ರಿಂದ ಜೂನ್ 2024ರವರೆಗೆ 1,87,72,16,500 ವೆಚ್ಚ ಭರಿಸಲಾಗಿದೆ ಎಂದು ಆಹಾರ ಇಲಾಖೆಯ ಉಪ ನಿರ್ದೇಶಕರಾದ ರಿಯಾಜ್ ಅವರು ಸಭೆಗೆ ಮಾಹಿತಿ ನೀಡಿದರು.
ಶಕ್ತಿ ಯೋಜನೆಯಡಿ ವಿಜಯನಗರ ಜಿಲ್ಲೆಯಲ್ಲಿ 4,17,54,532 ಸಂಖ್ಯೆಯ ಪ್ರಯಾಣಿಕರು ಶಕ್ತಿ ಯೋಜನೆಯಡಿ ಪ್ರಯಾಣಿಸಿದ್ದು ಇದರಿಂದ ಸಾರಿಗೆ ಇಲಾಖೆಗೆ 153,95,62,164 ರೂಪಾಯಿ ಆದಾಯ ಬಂದಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಅಧಿಕಾರಿಗಳಿಗೆ ಸೂಚನೆ : ಜನಪರವಾಗಿರುವ ಗ್ಯಾರಂಟಿ ಯೋಜನೆಗಳ ಲಾಭವು ಸಮಾಜದಲ್ಲಿನ ಪ್ರತಿಯೊಬ್ಬ ಕಟ್ಟಕಡೆಯ ವ್ಯಕ್ತಿಗೂ ಸಿಗಬೇಕು. ಈ ನಿಟ್ಟಿನಲ್ಲಿ ಅರ್ಹ ಫಲಾನುಭವಿಗಳು ಈ ಯೋಜನೆಯ ವ್ಯಾಪ್ತಿಗೆ ಒಳಪಡುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಜಿಲ್ಲಾಮಟ್ಟದ ಅಧ್ಯಕ್ಷರು ಮತ್ತು ಸದಸ್ಯರು ಎಲ್ಲರೂ ಈ ಯೋಜನೆಗಳ ಬಗ್ಗೆ ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದರು.
ಫಲಾನುಭವಿಗಳ ಸಮಾವೇಶಕ್ಕೆ ಸಿದ್ಧತೆ : ವಿವಿಧ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಿ ಯಶಗೊಂಡ ಹಿನ್ನೆಲೆಯಲ್ಲಿ ಈ ಯೋಜನೆಗಳ ಬಗ್ಗೆ ಮತ್ತಷ್ಟು ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಆಯಾ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಬೇಕು ಎನ್ನುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಈ ಬಗ್ಗೆ ನಿರ್ಣಯ ತೆಗೆದುಕೊಂಡಲ್ಲಿ ಎಲ್ಲಾ ಜಿಲೆಗಳಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಅಧ್ಯಕ್ಷರಿಗೆ ಆಮಂತ್ರಣ ನೀಡಬೇಕು : ಗ್ಯಾರಂಟಿ ಯೋಜನೆಗಳು ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಅಧಿಕಾರಿಗಳು ಗ್ಯಾರಂಟಿ ಯೋಜನೆಯ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷರಿಗೆ ಸಹ ಆಮಂತ್ರಣ ನೀಡಬೇಕು. ತಾಲೂಕುಮಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಹ ಆಮಂತ್ರಣ ನೀಡಬೇಕು ಎಂದು ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ ಷಾಹ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ, ಜಿಲ್ಲಾ ಪಂಚಾಯತ್‌ನ ಮುಖ್ಯ ಯೋಜನಾಧಿಕಾರಿ ಜೆ.ಎಂ.ಅನ್ನದಾನÀಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವಿಜಯನಗರ ಜಿಲ್ಲಾಧ್ಯಕ್ಷರಾದ ಕೆ. ಶಿವಮೂರ್ತಿ, ಉಪಾಧ್ಯಕ್ಷರಾದ ಕೆ.ಬದಾವಲಿ, ಚಂದ್ರಪ್ಪ ಹುಲಿಕಟ್ಟಿ, ಜಿನಕಲ್ ನಾಗಮಣಿ, ಕೆ.ಎಸ್.ಶಾಂತನಗೌಡ, ಸೊನ್ನದ ಗುರುಬಸವರಾಜ, ಸದಸ್ಯರಾದ ಭಾಗ್ಯಲಕ್ಷಿö್ಮ ಭರಾಡ, ಸಿ.ಸೋಮಪ್ಪ, ವೆಂಕಟರಾಮ ಡಿ., ಗೋಣೆಪ್ಪ ಕಲ್ಲಹಳ್ಳಿ, ಪ್ರಭಾಕರ, ಎಂ.ದಾದಾಪೀರ್, ಜಿಲನ್, ಟಿ.ಉಮೇಶ, ಜಿ.ಬಸವರಾಜ್, ಎಲ್ ಚಂದ್ರನಾಯ್ಕ್, ಮಂಜುನಾಥ, ಗುರುವಿನ ರವೀಂದ್ರ, ಯು.ಬಾಬುವಾಲಿ, ದೇವರಾಜ್ ಪಿ.ಎಚ್., ಪರಶುರಾಮ್ ಸೇರಿದಂತೆ ಇತರರು ಇದ್ದರು.