ಶ್ರೀ ಕೃಷ್ಣ ಜಯಂತಿ ಪೂರ್ವಭಾವಿ ಸಭೆ (1)

ಶ್ರೀ ಕೃಷ್ಣ ಜಯಂತಿ : ಅಗತ್ಯ ಸಿದ್ಧತೆಗೆ ಸಲಹೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 8- ಶ್ರೀ ಕೃಷ್ಣ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಹೇಳಿದರು.

ಶ್ರೀ ಕೃಷ್ಣ ಜಯಂತಿ ಆಚರಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 08ರಂದು ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಡಳಿತದಿಂದ ಶ್ರೀ ಕೃಷ್ಣ ಜಯಂತಿಯ ಆಚರಣೆ ಕಾರ್ಯಕ್ರಮವನ್ನು ಕಳೆದ ವರ್ಷದಂತೆ ಈ ಬಾರಿಯು ಆಗಸ್ಟ್ 26ರ ಬೆಳಿಗ್ಗೆ 10ಗಂಟೆಗೆ ಕೊಪ್ಪಳದ ಶಿರಸಪ್ಪಯ್ಯನ ಮಠ ಬಳಿ ಇರುವ ಶ್ರೀ ಕೃಷ್ಣ ದೇವಸ್ಥಾನದ ಆವರಣದಲ್ಲಿ ಆಚರಿಸಲಾಗುತ್ತಿದೆ.

ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವೇದಿಕೆ ಅಲಂಕಾರ, ವಿಶೇಷ ಉಪನ್ಯಾಸ ಆಯೋಜನೆ, ಕುಡಿಯುವ ನೀರಿನ ವ್ಯವಸ್ಥೆ, ಜಯಂತಿ ಅಂಗವಾಗಿ ನಡೆಯುವ ಮೆರವಣಿಗೆ ಸಂದರ್ಭದಲ್ಲಿ ರಸ್ತೆ ಸ್ವಚ್ಛತೆ ಸೇರಿದಂತೆ ಎಲ್ಲಾ ವ್ಯವಸ್ಥೆಯನ್ನು ಸಮರ್ಪಕವಾಗಿ ಕೈಗೊಳ್ಳಲು ಅಗತ್ಯ ಏರ್ಪಾಡು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶ್ರೀ ಕೃಷ್ಣ ಜಯಂತಿಯಲ್ಲಿ ಎಲ್ಲ ಸಮಾಜದ ಮುಖಂಡರು, ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಹಾಗೂ ಜಿಲ್ಲಾಡಳಿತಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸಭೆಯ ಮೂಲಕ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರದ ಕೃಷ್ಣಮೂರ್ತಿ ದೇಸಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಎ.ಬಸವರಾಜ, ಸಮಾಜದ ಮುಖಂಡರಾದ ನಾರಾಯಣಗೌಡ ಪಾಟೀಲ, ಜಗನ್ನಾಥ ಯಾದವ, ಭೀಮಣ್ಣ ಲೇಬಗೇರಿ, ಯಂಕಪ್ಪ ವಾಲಿಕಾರ, ವೆಂಕಟೇಶ, ರಾಮ ಬಾಗಲಿ, ಪರುಶುರಾಮ ಸೇರಿದಂತೆ ಇನ್ನೂ ಪ್ರಮುಖರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!