
ಶ್ರೀರಾಘವೇಂದ್ರ ಸ್ವಾಮಿಗಳವರ ಮಧ್ಯಾರಾಧನೆ, ವಿಶೇಷ ಪೂಜೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 21- ನಗರದ ಬೆಂಗಳೂರು ರಸ್ತೆಯ ತೆರು ಬೀದಿಯ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 353ನೇ ಆರಾಧನಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಗುರುರಾಯರ ಮಧ್ಯರಾಧಾನೆ ಮಹೋತ್ಸವ ಹಿನ್ನೆಲೆ ಶ್ರೀಮಠದಲ್ಲಿ ಬೆಳಿಗ್ಗೆ ಶ್ರೀ ರಾಘವೇಂದ್ರ ಸ್ವಾಮಿಗಳವರ ಅಷ್ಟೋತ್ತರ ಪಾರಾಯಣ, ಶ್ರೀ ಹರಿವಾಯುಸ್ತುತಿ ಮoತ್ರ ಪಠಣೆ, ವಿಶೇಷ ಪೂಜೆ, ಅಲಂಕಾರ, ಮಹಾನೈವೇದ್ಯ, ಮಹಾ ಮಂಗಳಾರತಿ ಸೇರಿದಂತೆ. ವಿವಿಧ ಪೂಜೆಗಳು ನಡೆದವು.
ವಿವಿಧ ಪಂಡಿತರಿಂದ ಉಪನ್ಯಾಸ, ವಿವಿಧ ಭಜನಾ ಮಂಡಳಿ ಸದಸ್ಯರಿಂದ ಸಾಮೋಹಿಕ ಭಜನೆ ಸೇರಿದಂತೆ ವಿವಿಧ ಪೂಜೆಗಳು ನಡೆದವು.
ನಗರ ಸೇರಿದಂತೆ ನಾನಾ ಕಡೆಯಿಂದ ಆಗಮಿಸಿದ ಭಕ್ತರು ಗುರುರಾಯರ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು. ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು.
ಸಂಜೆ ಮುದ್ದು ಮಕ್ಕಳಿಂದ ವಿವಿಧ ಸಾoಸ್ಕೃತಿಕ ಕಾರ್ಯಕ್ರಮಗಳು ನಡೆದವು.