6

ಶ್ರೀ ರಾಘವೇಂದ್ರ ತೀರ್ಥ ಆರಾಧನೆ ಸಂಪನ್ನ ವಿಜೃಂಭಣೆಯಿಂದ ಜರುಗಿದ ರಥೋತ್ಸವ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 22- ಬೇಡಿದ ವರ ಕೊಡುವ, ಕಲ್ಪವೃಕ್ಷ ಕಾಮಧೇನು, ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ ಉತ್ತಾರರಾಧನೆ ಹಿನ್ನೆಲೆ ಗುರುವಾರ ನಗರದಲ್ಲಿ ರಥೋತ್ಸವ ಸಾವಿರಾರು ಭಕ್ತರ ಮಧ್ಯೆ ವಿಜೃಂಭಣೆಯಿಂದ ನೆರವೇರಿತು.

ನಗರದ ಶ್ರೀ ಸತ್ಯನಾರಾಯಣ ಪೇಟೆ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳವರ ಶ್ರೀ ಮಠದಲ್ಲಿ ಬೆಳಿಗ್ಗೆ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಪಂ.ನರಹರಿ ಆಚಾರ ಅವರ ನೇತೃತ್ವದಲ್ಲಿ ವಿಶೇಷ ಪೂಜೆ, ಶ್ರೀರಾಘವೇಂದ್ರ ತೀರ್ಥರ ಅಷ್ಟೋತ್ತರ ಪಾರಾಯಣ, ಶ್ರೀ ಹರಿವಾಯುಸ್ತುತಿ ಮಂತ್ರ ಪಠಣ, ವಿವಿಧ ಪಂಡಿತರಿಂದ ಉಪನ್ಯಾಸ ಸೇರಿದಂತೆ ಶ್ರೀ ಗುರುರಾಯರಿಗೆ ವಿಶೇಷ ಅಲಂಕಾರ, ಮಹಾ ನೈವೇದ್ಯ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಪೂಜೆಗಳು ವಿಜೃಂಭಣೆಯಿಂದ ನಡೆದವು.

ಇದಕ್ಕೂ ಮುನ್ನ ಬೆಳಿಗ್ಗೆ ಶ್ರೀಮಠದಿಂದ ಪ್ರಾರಂಭವಾದ ಮಹಾ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

ಶ್ರೀ ಮಠದ ಅರ್ಚಕರಾದ ಶ್ರೀ ಪಂ.ಪ್ರಸನ್ನ ಆಚಾರ ರರ್ಥೋತ್ಸವಕ್ಕೆ ಚಾಲನೆ ನೀಡಿದರು. ಈ ವೇಳೆ ವಿವಿಧ ಭಜನಾ ಮಂಡಳಿ ಸದಸ್ಯರಿಂದ ಸಾಮೂಹಿಕ ಭಜನೆ, ಕೋಲಾಟ, ಡೊಳ್ಳು ಕುಣಿತ ಗಮನಸೆಳೆಯಿತು. ನಗರ ಸೇರಿದಂತೆ ನಾನಾ ಕಡೆಯಿಂದ ಆಗಮಿಸಿದ ನೂರಾರು ಭಕ್ತರು ದೇವರ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು. ನಂತರ ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಮಠದ ನೂರಾರು ಭಕ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!