
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ
ಕರುನಾಡ ಬೆಳಗು ಸುದ್ದಿ
ವಿಜಯನಗರ, 27- ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳು ಜಿಲ್ಲಾಡಳಿತ ಕಛೇರಿ ಮುಂದೆ ಮುಷ್ಕರ ಹಮ್ಮಿಕೊಂಡಿದ್ದರು.
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ (ರಿ) ದಾವಣಗೆರೆ, ಜಿಲ್ಲಾ ಘಟಕ ವಿಜಯನಗರ ಜಿಲ್ಲಾ ವತಿಯಿಂದ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ಹಮ್ಮಿಕೊಂಡಿದ್ದು ಜಿಲ್ಲಾಧಿಕಾರಿಗಳಿಗೆ ಮನ ವಿಸಲ್ಲಿಸಿದರಿ.
ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಯಂಕಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಗುರುಬಸವರಾಜ.ಸಿ. ಉಪಾಧ್ಯಕ್ಷ ವೀರೇಶ್ ಖಜಾಂಚಿ ಬಸವರಾಜ ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ತಾಲೂಕು ಅಧ್ಯಕ್ಷ ರವಿಚಂದ್ರ ಗೊಗ್ಗಿ, ಮಲ್ಲೇಶ್ ನಾಯ್ಕ, ಶಶಿಕುಮಾರ್, ಜ್ಯೋತಿಬಾಯಿ, ಮರುಳಸಿದ್ದಪ್ಪ, ದೇವೇಂದ್ರಪ್ಪ ಮತ್ತು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಮಲ್ಲಿಕಾರ್ಜುನಗೌಡ ಕಾರ್ಯದರ್ಶಿ ವೀರಭದ್ರೇಶ್, ಗ್ರಾಮ ಸಹಾಯಕರ ಜಿಲ್ಲಾ ಸಂಘದ ಅಧ್ಯಕ್ಷ ಟಿ.ಪಕ್ಕೀರಪ್ಪ ಮತ್ತು ಪದಾಧಿಕಾರಿಗಳು, ಎಲ್ಲಾ ಹಂತದ ಗ್ರಾಮ ಆಡಳಿತ ಅಧಿಕಾರಿಗಳ ಪದಾಧಿಕಾರಿಗಳು ಜಿಲ್ಲೆಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಸದರಿ ಮುಷ್ಕರಕ್ಕೆ ರೈತ ಸಂಘದ ಮುಖಂಡರು ಬೆಂಬಲ ಸೂಚಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದರು.