ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನ ಸೌಲಭ್ಯ
ಕರುನಾಡ ಬೆಳಗು ಸುದ್ದಿ
ವಿಜಯನಗರ, 8- ಪ್ರಸ್ತುತ ವರ್ಷದಲ್ಲಿ ಜಿಲ್ಲೆಯ ಒಟ್ಟು ೬ ತಾಲ್ಲೂಕುಗಳಲ್ಲಿ ರಾಜ್ಯ ವಿಪತ್ತು ನಿರ್ವಹಣಾ ನಿಧಿ ಹಾಗೂ ಕೃಷಿ ಭಾಗ್ಯ ಯೋಜನೆಯನ್ನು ಸಾಮಾನ್ಯ ವರ್ಗದ ರೈತರಿಗೆ ೮೦ ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ೯೦ ರಷ್ಟು ಸಹಾಯಧನದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಸಹಾಯಧನ : ಕ್ಷೇತ್ರ ಬದು ನಿರ್ಮಾಣದಲ್ಲಿ ಸಾಮಾನ್ಯರಿಗೆ ೮೦ ರಷ್ಟು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ೯೦ ರಷ್ಟು ಸಹಾಯಧನ ನೀಡಲಾಗುವುದು. ನೀರು ಸಂಗ್ರಹಣಾ ರಚನೆಗೆ (ಕೃಷಿ ಹೊಂಡ) ಸಾಮಾನ್ಯರಿಗೆ ೮೦ ರಷ್ಟು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ೯೦ ರಷ್ಟು ಸಹಾಯಧನ ನೀಡಲಾಗುವುದು.
ನೀರು ಇಂಗದಂತೆ ತಡೆಯಲು ಪಾಲಿಥೀನೊಂದಿಕೆ (ಗರಿಷ್ಠ-ರೂ ೫೦೦೦೦ ಸಾಮಾನ್ಯರಿಗೆ ೮೦ ರಷ್ಟು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ೯೦ ರಷ್ಟು ಸಹಾಯಧನ ನೀಡಲಾಗುವುದು. ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ನಿರ್ಮಾಣಕ್ಕೆ ಸಾಮಾನ್ಯರಿಗೆ ೪೦ ರಷ್ಟು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ೫೦ ರಷ್ಟು ಸಹಾಯಧನ ನೀಡಲಾಗುವುದು. ಹೊಂಡದಿAದ ನೀರು ಎತ್ತಲು ಡೀಸೆಲ್, ಪೆಟ್ರೋಲ್, ಸೋಲಾರ್ಪಂಪ್ಸೆಟ್ ನಿರ್ಮಾಣಕ್ಕೆ ಸಾಮಾನ್ಯರಿಗೆ ೫೦ ರಷ್ಟು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ೯೦ ರಷ್ಟು ಸಹಾಯಧನ ನೀಡಲಾಗುವುದು. ನೀರನ್ನು ಬೆಳಗೆ ಹಾಯಿಸಲು ಸೂಕ್ಷ್ಮ (ತುಂತುರು/ಹನಿ) ನೀರಾವರಿ ನಿರ್ಮಾಣಕ್ಕೆ ಸಾಮಾನ್ಯರಿಗೆ ೯೦ ರಷ್ಟು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ೯೦ ರಷ್ಟು ಸಹಾಯಧನ ನೀಡಲಾಗುವುದು.
ಅರ್ಜಿ ನಮೂನೆಯನ್ನು ಸಂಬಂಧಿಸಿದ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದು ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ದೇಶಗಳು : ರಾಜ್ಯದ ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವುದು. ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸುವುದು ಮತ್ತು ಆದಾಯವನ್ನು ಹೆಚ್ಚಿಸುವುದು. ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಮುಖ್ಯ ಉದ್ದೇಶವಾಗಿರುತ್ತದೆ. ಈ ಯೋಜನೆಯ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ಈ ಕಚೇರಿಗೆ ಭೇಟಿ ನೀಡಿ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.