KB

ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆ ಸದುಪಯೋಗ ಪಡೆದುಕೊಳ್ಳಿ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 9- ಭಾರತ ಸರ್ಕಾರದ ನವದೆಹಲಿ ಅನುಸೂಚಿತ ಪಂಗಡಗಳ ಮಂತ್ರಾಲಯ ವತಿಯಿಂದ ೨೦೨೪-೨೫ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ.

ಕೊಪ್ಪಳ ಜಿಲ್ಲೆಯೆ ಪರಿಶಿಷ್ಟ ಪಂಗಡದ ಜನಾಂಗದವರು ಹೆಚ್ಚಾಗಿರುವ ಜಿಲ್ಲೆಯ ಆಯ್ದ ೭ ತಾಲ್ಲೂಕುಗಳಿಂದ ೪೦ ಗ್ರಾಮಗಳನ್ನು ಕಾರ್ಯಕ್ರಮದಡಿ ಆಯ್ಕೆ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀಸಲಿರಿಸಿದ ರೂ ೭೯.೧೫೬ ಕೋಟಿಗಳಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ದೇಶದ ೬೩ ಸಾವಿರ ಗ್ರಾಮಗಳನ್ನು ಅಭಿವೃದ್ಧಿ ಪಡಿಸಲು ಕ್ರೀಯಾ ಯೋಜನೆಯನ್ನು ರೂಪಿಸಲಾಗಿದೆ.

ಕೇಂದ್ರ ಬುಡಕಟ್ಟು ಮಂತ್ರಾಲಯ ಈ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯಾಗಿದ್ದು, ದೇಶದ ಸುಮಾರು ೦೫ ಕೋಟಿ ಜನರಿಗೆ ಯೋಜನೆಯಿಂದ ಅನುಕೂಲವಾಗಲಿದೆ, ಪ್ರಸ್ತಕ ಸಾಲಿನಿಂದ ೨೦೨೮-೨೯ನೇ ಸಾಲಿನವರೆಗೆ ೦೫ ವರ್ಷಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಲಾಗಿರುತ್ತದೆ.

ಪ್ರಸ್ತಕ ಸಾಲಿನಿಂದ ೨೦೨೫-೨೬ನೇ ಸಾಲಿನವರೆಗೆ ಮೊದಲ ಹಂತದಲ್ಲಿ ರೂ ೪೦೦೦ ಕೋಟಿ ರೂ.ಗಳ ಅನುದಾನವನ್ನು ಪ್ರಧಾನಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ನಿಗದಿಮಾಡಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಜನಾಂಗದವರು ಹೆಚ್ಚಾಗಿ ವಾಸಿಸುವ ೪೦ ಗ್ರಾಮಗಳನ್ನು ಆಯ್ಕೆಮಾಡಿ ಭೌತಿಕ ಗುರಿ ನಿಗದಿಪಡಿಸಿದ್ದು, ೧೭ ವಿವಿಧ ಇಲಾಖೆಗಳು ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಿವೆ. ಜಿಲ್ಲೆಯಲ್ಲಿ ೧೦೦ ಬುಡಕಟ್ಟು ಬಹುಉಪಯೋಗಿ ಮಾರ್ಕೆಟಿಂಗ್ ಕೇಂದ್ರಗಳು, ಆಶ್ರಮ ಶಾಲೆಗಳು, ವಿದ್ಯಾರ್ಥಿನಿಲಯಗಳು, ಸರ್ಕಾರಿ ಅಥವಾ ರಾಜ್ಯ ಬುಡಕಟ್ಟು ವಸತಿ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸುಧಾರಿಸುವುದು.

ಅರಣ್ಯಹಕ್ಕು ಕಾಯ್ದೆ-೨೦೦೬ ಮತ್ತು ಸಮುದಾಯ ಅರಣ್ಯ ಹಕ್ಕು ನಿರ್ವಹಣೆ ಮದ್ಯಸ್ಥಿಕೆಗಳಿಗೆ ಬೆಂಬಲ, ಯೋಜನಾ ನಿರ್ವಹಣಾ ನಿಧಿಗಳು ಉತ್ಪನ್ನ ಪ್ರದರ್ಶನ ನೀಡುವ ಬುಡಕಟ್ಟು ಜಿಲ್ಲೆಗಳಿಗೆ ಪ್ರೋತ್ಸಾಹ ನೀಡಲು ಅವಕಾಶ ಕಲ್ಪಿಸಲಾಗಿದೆ. ಯೋಜನೆಗೆ ಒಳಪಟ್ಟ ೪೦ ಗ್ರಾಮದ ಎಲ್ಲಾ ಬುಡಕಟ್ಟು ಜನಾಂಗದವರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!