ಜಮೀರ್ ಅಹ್ಮದ್ ಖಾನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ : ಮೀನಳ್ಳಿ ತಾಯಣ್ಣ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 13- ಭಾರತ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕ ಸಚಿವ ಹಾಗೂ ಜನತಾದಳ (ಜಾತ್ಯಾತೀತ) ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಬಗ್ಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಿಯ ಪ್ರಚಾರದ ಸಂದರ್ಭದಲ್ಲಿ ಸಚಿವ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಜನಾಂಗೀಯ ನಿಂದೇನೆ ಅಂತ ಅವಹೇಳನಕಾರಿ ಹಾಗೂ ಕರಿಯ ಕುಮಾರ ಸ್ವಾಮಿ ಎಂಬ ಅಸಭ್ಯ ಭಾಷೆ ಬಳಸಿರುತ್ತಾರೆ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಆಗ್ರಹಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸಿ ಮಾತನಾಡಿ, ರಾಜ್ಯ ಸರ್ಕಾರದ ವಸತಿ, ವಕ್ಸ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವರಾದ ಬಿ.ಝಡ್.ಜಮೀರ್ ಅಹ್ಮದ್ ಖಾನ್ರವರ ಅವ ಹೇಳನಕಾರಿ ಹೇಳಿಕೆಯನ್ನು ಬಳ್ಳಾರಿ ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷವು ತೀವ್ರವಾಗಿ ಖಂಡಿಸುತ್ತಾ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಮತ್ತು ಬಿ.ಝಡ್.ಜಮೀರ್ ಅಹ್ಮದ್ ಖಾನ್ ರವರನ್ನು ಸಚಿವ ಸಂಪುಟದಿAದ ವಜಗೊಳಿಸಿ ಎಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಮತ್ತು ಹಲವಾರು ಕಾರ್ಯಕರ್ತರು ಇದ್ದರು.
