ಹೆಣ್ಣು ಮಕ್ಕಳು ವಿದ್ಯಾಭ್ಯಾಸಕ್ಕೆ ಬೇಕಾದ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ : ತಮ್ಮನಗೌಡ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 30- ಕಾನೂನಿನ ಅಡಿ ಸರ್ಕಾರಿ ಶಾಲೆಗಳಲ್ಲಿ ೯ನೇ ತರಗತಿ ವಿದ್ಯಾರ್ಥಿನಿಯರ ರಕ್ಷಣೆಗಾಗಿ ಕರಾಟೆ ತರಬೇತಿಯನ್ನು ನೀಡಲಾಗುತ್ತಿದೆ ವಿದ್ಯಾಭ್ಯಾಸಕ್ಕೆ ಬೇಕಾದ ಹಲವಾರು ಸೌಲಭ್ಯಗಳಿವೆ ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ತಮ್ಮನ ಗೌಡ ಪಾಟೀಲ್ ಹೇಳಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ತಾಲೂಕು ವಕೀಲರ ಸಂಘ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ವಕೀಲರ ಸಂಘದ ಅಧ್ಯಕ್ಷ ಉಪ್ಪಾರು ವೆಂಕೋಬ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶ್ವಸಂಸ್ಥೆಯಿ0ದ ಅಂತರ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯನ್ನು ಅ.೧೧ರ ೨೦೧೨ರಲ್ಲಿ ದಿನಾಚರಣೆಗೆ ಮುಂದಾಗಿದೆ ಮಹಿಳೆಯರಿಗೆ ಸರ್ಕಾರದ ಅಡಿಯಲ್ಲಿ ಲಭ್ಯವಿರುವ ಸೌಲಭ್ಯಗಳಾದ ಶಿಕ್ಷಣ ಹಕ್ಕು ಸುಕನ್ಯಾ ಸಮೃದ್ಧಿ ಯೋಜನೆ ಭಾಗ್ಯಲಕ್ಷ್ಮಿ ಯೋಜನೆ ಶೇಕಡ ೩೩ರ ಮೀಸಲಾತಿ ಮಹಿಳೆಯರ ರಕ್ಷಣೆಯ ಹಕ್ಕುಗಳು ಮತ್ತು ಹೆಣ್ಣು ಭ್ರೂಣ ಹತ್ಯೆ ಇನ್ನಿತರ ದೌರ್ಜನ್ಯಗಳನ್ನು ತಡೆಗಟ್ಟುವ ಜಾಗೃತಿ ಮೂಡಿಸಲೆಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಸರ್ಕಾರಿ ಅಭಿಯೋಜಕರಾದ ಬಿ.ಎಲ್.ಶಾರದಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಜಿ.ಪ್ರದೀಪ್ ಹೆಣ್ಣು ಮಗುವಿನ ಕುರಿತು ಮಾತನಾಡಿದರು.
ಉಪಪ್ರಾಂಶುಪಾಲ ಪಿ.ವೆಂಕಟೇಶ್ ಶೆಟ್ಟಿ, ರಾಷ್ಟೀಯ ಸಾಕ್ಷರತಾ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ, ಸಿಆರ್‌ಪಿ ಮಾರುತಿ, ವಕೀಲರ ಸಂಘದ ಉಪಾಧ್ಯಕ್ಷ ಎಂ.ಶರೀಫ್ ಸಾಬ್, ಕಾರ್ಯದರ್ಶಿ ಶಿವಕುಮಾರ್.ಎಂ.ಪ್ಯಾನಲ್, ವಕೀಲ ಮಲ್ಲಿಗೌಡ, ಟಿ.ವೆಂಕಟೇಶ್ ನಾಯಕ್, ನೆಲಗುಂಟಯ್ಯ, ಸರೋಜಾ, ಬಸಮ್ಮ, ಶಾಲಾ ಮುಖ್ಯ ಮತ್ತು ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.