
ಪ್ರಜೆಗಳ ಆರೋಗ್ಯವೇ ದೇಶದ ಆರೋಗ್ಯ : ಸಿದ್ದೇಶ್ವರ.ಎನ್
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 8- ಪ್ರಜೆಗಳು ಆರೋಗ್ಯದಿಂದ ಇದ್ದರೆ ದೇಶವು ಆರೋಗ್ಯದಿಂದ ಇದ್ದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಸಿದ್ದೇಶ್ವರ .ಎನ್ ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತಾಶ್ರದಲ್ಲಿ ನಗರದ ವಾಲ್ಮೀಕಿ ಭವನದಲ್ಲಿ ಇತ್ತೀಚೆಗೆ ನಡೆದ ಪೋಷಣ್ ಮಾಸಾಚರಣೆ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ನಮ್ಮಲ್ಲಿ ಅಪೌಷ್ಠಿಕತೆಯಿಂದ ಅನೇಕ ಜನರು ಬಳಲುತ್ತಿದ್ದಾರೆ. ಇದು ದೇಶದ ಅಭಿವೃದ್ಧಿಗೆ ಮಾರಕವೆಂದು ತಿಳಿಸಿದರು.
ನಂತರದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೋಹಿಣಿ ಕೊಟಗಾರ ಅವರು ಮಾತನಾಡಿ “ಸುಮೋಷಿತ್ ಕಿಶೋರಿ, ಸಶಕ್ತ ನಾರಿ” ಎಂಬ ಘೋಷವಾಕ್ಯದ ಮೂಲಕ ಸರಿಯಾದ ಶಿಕ್ಷಣ, ಶಿಶುಗಳ ಆರೈಕೆ, ಕಾಳಜಿ ವಿಷಯಗಳ ಬಗ್ಗೆ ವಿವರವಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ, ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ, ಪ್ರಶಸ್ತಿ ವಿತರಣೆ, ಕೈ ತೋಳೆಯುವ ವಿಧಾನದ ನೃತ್ಯ ಹೀಗೆ ಪೋಷಣ್ ಮಾಸಾಚರಣೆಯ ಸಮಾರೋಪ ಸಮಾರಂಭ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಅನ್ನಪೂರ್ಣ ಕುಬಕಟ್ಟಿ, ಜಿಲ್ಲಾ ನಿರೂಪಣಾಧಿಕಾರಿಗಳಾದ ಗಂಗಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೋಹಿಣಿ ಕೊಟಗಾರ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೂಪಾ ಗಂಧದ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶಿವಶರಣಪ್ಪ ಗದ್ದಿ, ಎಲ್ಲಾ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಲಯದ ಎಲ್ಲಾ ಹಿರಿಯ ಕಿರಿಯ ಮೇಲ್ವಿಚಾರಕಿಯರು, ಪೋಷನ್ ಅಭಿಯಾನ ಯೋಜನೆಯ ತಾಲ್ಲೂಕಾ ಸಂಯೋಜಕರಾದ ಚೇಲನಾರಾಣಿ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಗರ್ಭಿಣಿಯರು, ಬಾಣಂತಿಯರು, ಊರಿನ ಸರ್ವ ಸದಸ್ಯರು ಉಪಸ್ಥಿತರಿದ್ದರು.