ಪ್ರಜಾಪ್ರಭುತ್ವ ದಿನ ಆಚರಣೆಯಿಂದ ಹೊಸ ಇತಿಹಾಸ ಬರೆಯುವ ಕಾರ್ಯ : ಸಚಿವ ತಂಗಡಗಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 15- ಕೊಪ್ಪಳ ಜಿಲ್ಲೆಯಲ್ಲಿ ಸೆ.15ರಂದು ನಡೆದ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿಯು ಸಂವಿಧಾನದ ಜೀವತತ್ವ ಮಾನವತೆಯ ಅಂತಃಕರಣ ಬೆಸೆಯುವಲ್ಲಿ ಯಶ ಕಂಡಿತು.
ಕಣ್ಣು ಹಾಯಿಸಿದೆಲ್ಲೆಡೆ ಮಾರ್ಗದುದ್ದಕ್ಕು ಮಾನವ ಸರಪಳಿ ಕಾಣಿಸಿತು. ವಿದ್ಯಾರ್ಥಿ-ಯುವಜನರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಸಂಘದ ಸದಸ್ಯರು, ನೌಕರರು, ಶಿಕ್ಷಕರು, ಕಾರ್ಮಿಕರು, ರೈತರು, ಮಹಿಳೆಯರು ಕಾರ್ಯಕ್ರಮದಲ್ಲಿ ಮನಪೂರ್ವಕವಾಗಿ ಭಾಗಿಯಾದರು. ಮಾನವ ಸರಪಳಿಗೆ ಪರಸ್ಪರ ಕೈಜೋಡಿಸಿ ಜೈ ಹಿಂದ್.. ಜೈ ಕರ್ನಾಟಕ.. ಘೋಷಣೆ ಮೊಳಗಿಸಿದರು. ದಿನೇದಿನೆ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯು ಬಲಗೊಳ್ಳುತ್ತದೆ ಎಂಬುದಕ್ಕೆ ಪ್ರತ್ಯಕ್ಷ ಸಾಕ್ಷಿಯಾದರು.
ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ದಿ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಯೊAದಿಗೆ ನಿರಂತರ ಸಭೆ ನಡೆಸಿ, ಅಧಿಕಾರಿಗಳು ಹಾಗೂ ಸಿಬ್ಬಂದಿ, ಶಿಕ್ಷಕರು ಮತ್ತು ಇನ್ನೀತರರಿಗೆ ಜವಾಬ್ದಾರಿ ನೀಡಿ, ಸಚಿವರು, ಸಂಸದರು, ಶಾಸಕರು, ನಗರಸಭೆ, ಪುರಸಭೆ ಪಟ್ಟಣ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳ ಸಹಕಾರ ಪಡೆದು, ಉತ್ತಮ ಸಮನ್ವಯ ಸಾಧಿಸಿದ್ದರಿಂದಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಡೆದ ಮಾನವ ಸರಪಳಿಯು ಪೂರ್ವನಿಗದಿಯಂತೆ ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳಗಟ್ಟಿ ಗ್ರಾಮದಿಂದ ಆರಂಭವಾಗಿ ಕೊಪ್ಪಳ ಜಿಲ್ಲೆಯ ಸರಹದ್ದು ಟಿ.ಬಿ.ಡ್ಯಾಮ್ವರೆಗೆ ಯಶಸ್ವಿಯಾಗಿ ನೆರವೇರಿತು.
ವೇದಿಕೆ ಕಾರ್ಯಕ್ರಮ : ಕೊಪ್ಪಳ ಜಿಲ್ಲೆಯ ಐತಿಹಾಸಿಕ ಅಶೋಕ ವೃತದಲ್ಲಿ ಪ್ರಜಾಪ್ರಭುತ್ವ ದಿನದ ವೇದಿಕೆ ಕಾರ್ಯಕ್ರಮ ನೆರವೇರಿತು. ಪೂರ್ವನಿಗದಿಯಂತೆ ಕಾರ್ಯಕ್ರಮ ಸರಿಯಾದ ಸಮಯಕ್ಕೆ ಆರಂಭವಾಗಿ ಅಚ್ಚುಕಟ್ಟಾಗಿ ನಡೆಯಿತು. ಈ ಐತಿಹಾಸಿಕ ಮಾನವ ಸರಪಳಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅಶೋಕ ವೃತ್ತದೆಲ್ಲೆಡೆ ಜನಜಂಗುಳಿಯೇ ಸೇರಿತ್ತು. ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ಲೋಗೊ ಇರುವ ಭಾವುಟಗಳನ್ನು ಹಿಡಿದು ವಿದ್ಯಾರ್ಥಿ ಯುವಜನರು ಸಾಲಾಗಿ ಸಾಗಿ ಗಮನ ಸೆಳೆದರು.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ, ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಶಾಸಕರಾದ ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಉಪಾಧ್ಯಕ್ಷರಾದ ಅಶ್ವಿನಿ ಗದುಗಿನಮಠ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಮುಖಂಡರಾದ ಅಮರೇಗೌಡ ಪಾಟೀಲ ಬಯ್ಯಾಪುರ, ಮಾಲತಿ ನಾಯಕ, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಇನ್ನೀತ ಗಣ್ಯರು ಮಹಾತ್ಮರಾದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸುವ ಕಾರ್ಯ : ಈ ವೇಳೆ ಸಚಿವರಾದ ಶಿವರಾಜ ತಂಗಡಗಿ ಅವರು ಮಾತನಾಡಿ, ಮಾನ್ಯ ಸಿದ್ದರಾಮಯ್ಯನವರು ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಮೇಲೆ ನಾಡಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕಾರ್ಯವು ಪ್ರತಿ ವರ್ಷ ನಡೆಯುತ್ತಿದೆ. ಕೊಪ್ಪಳ ಜಿಲ್ಲೆಯಲ್ಲಿ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ರಚನೆ ಕಾರ್ಯಕ್ರಮವು ಜಿಲ್ಲಾಡಳಿತದಿಂದ ಅಚ್ಚುಕಟ್ಟಾಗಿ ಆಯೋಜನೆಯಾಗಿದೆ. ಸಂವಿಧಾನದ ಜೀವಪರ ಸಂದೇಶವನ್ನು ತಿಳಿಸುವ ಕಾರ್ಯವು ಜಿಲ್ಲಾಡಳಿತದಿಂದ ನಡೆಯುತ್ತಿದೆ. ಪ್ರಜಾಪ್ರಭುತ್ವ ದಿನ ಆಚರಣೆಯ ಮೂಲಕ ಹೊಸ ಇತಿಹಾಸ ಬರೆಯುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಸೇರಿದ ಎಲ್ಲರಿಗೂ ರಾಜ್ಯ ಸರ್ಕಾರದ ಪರವಾಗಿ ಅಭಿನಂದನೆ ತಿಳಿಸುವೆ ಎಂದರು.
ಸAವಿಧಾನ ಪೀಠಿಕೆ ವಾಚನ : ಜಿಲ್ಲಾ ಪಂಚಾಯತ್ ಸಿಇಓ ಅವರು ಸಮಾರಂಭದಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಪ್ರಾಸ್ತಾವಿಕ ಮಾತನಾಡಿದರು. ವೇದಿಕೆ ಕಾರ್ಯಕ್ರಮದ ಬಳಿಕ ಸಚಿವರು, ಸಂಸದರು, ಶಾಸಕರು ಮತ್ತು ಇನ್ನೀತರ ಗಣ್ಯರು ವಿದ್ಯಾರ್ಥಿ ಯುವಜನರು ಮತ್ತು ಸಾರ್ವಜನಿಕರೊಂದಿಗೆ ಮಾನವ ಸರಪಳಿಯಲ್ಲಿ ಭಾಗಿಯಾದರು.
ಗಿಡನೆಟ್ಟರು : ವೇದಿಕೆ ಕಾರ್ಯಕ್ರಮ ಪೂರ್ಣಗೊಳಿಸಿ ಅಲ್ಲಿಂದ ನಿರ್ಗಮಿಸಿದ ಸಚಿವರು, ಸಂಸದರು ಮತ್ತು ಶಾಸಕರು ನೇರವಾಗಿ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದರು. ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕಾವ್ಯ ಚತುರ್ವೇದಿ ಅವರ ಸಮ್ಮುಖದಲ್ಲಿ ಅರಣ್ಯ ಇಲಾಖೆಯಿಂದ ಆಯೋಜನೆಯಾಗಿದ್ದ ಗಿಡ ನೆಡುವ ಸಮಾರಂಭದಲ್ಲಿ ಭಾಗಿಯಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಸಿಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಜ್ಯೋತಿ ಗೊಂಡಬಾಳ ಸೇರಿದಂತೆ ಇನ್ನೀತರರು ಇದ್ದರು.
ಪ್ರಜಾಪ್ರಭುತ್ವ ದಿನಾಚರಣೆಯ ಸಮಾರಂಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತಕುಮಾರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ನಗರಸಭೆ ಪೌರಾಯುಕ್ತರಾದ ಗಣಪತಿ ಪಾಟೀಲ, ತಹಸೀಲ್ದಾರರಾದ ವಿಠ್ಠಲ್ ಚೌಗಲಾ, ಜಿಲ್ಲಾ ಹಾಗೂ ತಾಲೂಕುಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

