ಶಿಕ್ಷಕ ಹುದ್ದೆಗೆ ಸಮಾಜದಲ್ಲಿ ಅತ್ಯಂತ ಗೌರವವಿದೆ : ಎಂ.ಜಿ.ಪಲ್ಲೆದ
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ, 7- ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವಾಗಿದೆ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ಅವರನ್ನು ಈ ನಾಡಿನ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕ ಸಮುದಾಯದ ಮೇಲಿದೆ. ಶಿಕ್ಷಕ ಹುದ್ದಗೆ ಸಮಾಜದಲ್ಲಿ ಅತ್ಯಂತ ಗೌರವಿದೆ. ಈ ಗೌರವ ತಂದುಕೊಟ್ಟ ಕೀರ್ತಿ ಸರ್ವಪಲ್ಲಿ ಡಾ. ರಾಧಾಕೃಷ್ಣನ್‌ಗೆ ಸಲ್ಲುತ್ತದೆ ಎಂದು ಮುಧೋಳ್ ಗ್ರಾಮದ ನಿವೃತ್ತ ಹಿರಿಯ ಶಿಕ್ಷಕರಾದ ಎಂ ಜಿ ಪಲ್ಲೆದವರು ಹೇಳಿದರು.
ತಾಲೂಕಿನ ಮುಧೋಳ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜ್ ಹಾಗೂ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯ ನಿಮಿತ್ಯದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ಗೌರವಾರ್ಥವಾಗಿ ಹಾಗೂ ಸರಸ್ವತಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ರಾಷ್ಟ್ರಾಭಿಮಾನ ಮೂಡಿಸುವ ಶಿಕ್ಷಣಕ್ಕೆ ಶಿಕ್ಷಕರು ಕಾರ್ಯೋನ್ಮುಖರಾಗಬೇಕು ಎಂದರು. ಶಿಸ್ತು, ವಿದ್ಯೆ, ವಿನಯ ಇವುಗಳು ಇಂದಿನ ವಿದ್ಯಾರ್ಥಿಗಳಲ್ಲಿ ಇರಬೇಕಾದ ಅತ್ಯಂತ ಮೌಲ್ಯಯುತ ಗುಣಗಳಾಗಿವೆ. ಶಿಕ್ಷಕರಲ್ಲಿ ಕರ್ತವ್ಯ ಪ್ರಜ್ಞೆ ಇದ್ದರೆ ಶಿಕ್ಷಣ ಸುಧಾರಣೆಯಾಗುವುದು ಖಚಿತ. ಮಕ್ಕಳ ಸಾಮರ್ಥ್ಯಕ್ಕನುಗುಣವಾಗಿ ಶಿಕ್ಷಕರು ಬೋಧಿಸಿದರೆ ಮಕ್ಕಳ ಕಲಿಕೆಯ ಗುಣಮಟ್ಟಕ್ಕೆ ಪೂರಕವಾಗುತ್ತದೆ. ಕೇವಲ ಶಿಕ್ಷಕರು ಪಾಠ ಹೇಳಿದರೆ ಸಾಲದು, ಪಾಲಕರೂ ಮಕ್ಕಳ ಕಲಿಕಾ ಮಟ್ಟವನ್ನು ಪರೀಕ್ಷಿಸುವ ಪ್ರಯತ್ನ ಮಾಡಿದಾಗ ಮಾತ್ರ ಪರಿಪೂರ್ಣ ವಿದ್ಯಾರ್ಥಿಯಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ನಂತರ ನಿವೃತ್ತ ಮುಖ್ಯ ಶಿಕ್ಷಕರಿಗೆ ಎಂ ಜಿ ಪಲ್ಲೆದ ಸರ್ ಗೆ ಶಿಕ್ಷಕ ಬಳಗದವರೆಲ್ಲರೂ ಸೇರಿ ಸನ್ಮಾನ ಮಾಡಿದರು. ಮತ್ತು ಇನ್ನೊರ್ವ್ ಕ್ರೀಡಾ ಮಾರ್ಗದರ್ಶಕರಾದ ಕಾಂತೇಶ್ ಅವರಿಗೆ ಶಿಕ್ಷಕ ಬಳಗದವರಿಂದ ಹಾಗೂ ವಿದ್ಯಾರ್ಥಿಗಳಿಗಿಂದ ಸನ್ಮಾನ ಮಾಡಿದರು.
ಕಾಲೇಜ್ ವಿದ್ಯಾರ್ಥಿಗಳಿಗೆ ಹಾಗೂ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಗ್ರಂಥಾಲಯವನ್ನು ನಿವೃತ್ತ ಮುಖ್ಯ ಶಿಕ್ಷಕರಾದ ಎಂ ಜಿ ಪಲ್ಲೆ ದವರು ಉದ್ಘಾಟನೆ ಮಾಡಿದರು. ಇದೇ ಸಂದರ್ಭದಲ್ಲಿ ಮುಧೋಳ ಮತ್ತು ಕರಮುಡಿ ಕಾಲೇಜ್ ಪ್ರಾಚಾರ್ಯರು ದೊಡ್ಡ ಬಸಪ್ಪ, ಗುರುರಾಜ್, ಜಗದೀಶ್ ಬಳಿಗಾರ್, ಶಿವಲೀಲಾ ಬಳಿಗಾರ್, ಕಾಂತೇಶ್ ಹೊಸಮನಿ, ಆನಂದ್ ನಿಡಗುಂದಿ, ರಚಪ್ಪ ಅಂಗಡಿ, ಶೋಭಾ ಒದ್ನಾಳ್, ಸುಮಾ, ರಾಜೇಶ್ವರಿ, ಅಕ್ಕಮ್ಮ, ರುದ್ರೇಶ್ ಶಟ್ಟರ, ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಿ ಅಭಿನಂದಿಸಿದರು. ಇನ್ನುಳಿದ ಕಾಲೇಜ್ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು. ವಿದ್ಯಾರ್ಥಿನಿಯರು. ಮತ್ತು ಇತರು ಭಾಗವಹಿಸಿದರು