
ಇಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 30- ಕರ್ನಾಟಕ ಸರ್ಕಾರ ಬಳ್ಳಾರಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ೨೦೨೪ ಆ.೧ ಮಂಗಳವಾರ ಬೆಳಗ್ಗೆ ೧೧ ಗಂಟೆಗೆ ಬಳ್ಳಾರಿ ಮಹಾನಗರದ ಡಾ.ಜೋಳದ ರಾಶಿ ದೊಡ್ಡನಗೌಡ ರಂಗಮAದಿರದ ಸಭಾಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಕರ್ನಾಟಕ ಸರ್ಕಾರ ವಸತಿ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ಜೆಡ್ ಜಮೀರ್ ಅಹಮದ್ ಖಾನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಅಧ್ಯಕ್ಷತೆ ವಹಿಸುವರು ಶತಾಯಿಷಿಗಳಿಗೆ ಸನ್ಮಾನ ಮತ್ತು ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕ ಸಿರುಗುಪ್ಪ ಅಬ್ದುಲ್ ನಬಿ ಅವರು ಸೇರಿ ಹಿರಿಯ ನಾಗರಿಕರಿಗೆ ಗೌರವಿಸಿ ಬಹುಮಾನ ವಿತರಿಸಲಾಗುತ್ತದೆ.
ಬಳ್ಳಾರಿ ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ಹಿರಿಯ ನಾಗರಿಕರು ಮತ್ತು ಬಳ್ಳಾರಿ ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಬಳ್ಳಾರಿ ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣ ಅಧಿಕಾರಿ ಕೋರಿ ಪ್ರಕಟಿಸಿದ್ದಾರೆ ಎಂದು ಸಿರುಗುಪ್ಪ ಸಾಮಾಜಿಕ ಕಾರ್ಯಕರ್ತ ಹಿರಿಯ ನಾಗರಿಕ ಅಬ್ದುಲ್ ನಬಿ ಅವರು ತಿಳಿಸಿದರು.