
ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಕರುನಾಡ ಬೆಳಗು ಸುದ್ದಿ
ವಿಜಯನಗರ, 28- ಜೆಸ್ಕಾಂ ಕಮಲಾಪುರದ ೧೧೦/೧೧ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಅಕ್ಟೋಬರ್ ೨೯ ರಂದು ಬೆಳಿಗ್ಗೆ ೯ ರಿಂದ ಸಂಜೆ ೪ ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಅAದು ಕಮಲಾಪುರ ವ್ಯಾಪ್ತಿಗೆ ಬರುವ ಕಮಲಾಪುರ ಪಟ್ಟಣ ಪಂಚಾಯಿತಿ, ಬುಕ್ಕಸಾಗರ, ಸೀತರಾಮ ತಾಂಡ, ಮಲಪನಗುಡಿ, ಹಂಪಿ, ಪಾಪಿನಾಯಕನಹಳ್ಳಿ, ಗಾದಿಗನೂರು ಮತ್ತು ಬೈಲುವದ್ದೀಗೆರೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಹಾಗೂ ನೀರಾವರಿ ಪಂಪ್ ಸೆಟ್ ರೈತರಿಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ರೈತರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.