5

ಎಣ್ಣೆ ಬೀಜ ಬೆಳೆಗಾರರ ಮಂಡಳಿಗೆ ಪದಾಧಿಕಾರಿಗಳ ಅವಿರೋಧ ಆಯ್ಕೆ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 12- ಕರ್ನಾಟಕ ರಾಜ್ಯ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿಯಮಿತ ಅಧ್ಯಕ್ಷರಾಗಿ ಮಾಜಿ ಸಚಿವ ವೆಂಕಟರಾವ್ ನಾಡಗೌಡ, ತಾಲೂಕಿನ ಕೆಂಚನಗುಡ್ಡ ಗ್ರಾಮದ ಎಸ್.ಸೂಗನಗೌಡ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಆಯ್ಕೆಯಾದ ಸೂಗನಗೌಡರಿಗೆ ದೊರೆತ ಗೌರವಕ್ಕೆ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಟಿ.ಎಂ.ಚAದ್ರಶೇಖರಯ್ಯ ಸ್ವಾಮಿ ಅವರು ಹಾಗೂ ಸಿರುಗುಪ್ಪ ತಾಲೂಕಿನ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಮಲ್ಲಿಕಾರ್ಜುನಯ್ಯ ಸ್ವಾಮಿ, ಸಾಕ್ಷರತಾ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ ಪ್ರಮುಖ ಮುಖಂಡರು ಮತ್ತಿತರರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!