ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 21- ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಾದ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ಸಾಲ ಯೋಜನೆ), ಜೀಜಾವು ಜಲಭಾಗ್ಯ ಯೋಜನೆಯ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹು ಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಮರಾಠ ಮಿಲ್ಟಿç ಹೋಟೆಲ್ ಯೋಜನೆ, ಸ್ವಾಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಹಾಗೂ ಸ್ವಾತಂತ್ರö್ಯ ಮಹೋತ್ಸವ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ, ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು.
ವಿಶೇಷ ಸೂಚನೆ : ಒಂದು ಬಾರಿ ನಿಗಮಗದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಈ ಎಲ್ಲಾ ಯೋಜನೆಗಳಲ್ಲಿ ಸೌಲಭ್ಯ ಅರ್ಜಿ ಸಲ್ಲಿಸುವ ಮರಾಠ ಸಮುದಾಯ ಅರ್ಜಿದಾರರು ಸೇವಾಸಿಂಧು ಪೋರ್ಟಲ್ನಲ್ಲಿ ಗ್ರಾಮಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಗಳ ಮೂಲಕ ಆನ್ಲೈನಲ್ಲಿ ಮತ್ತು ಸ್ವಾತಂತ್ರ ಅಮೃತ ಮುನ್ನಡ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಶ https://www.kaushalkar.com ಮೂಲಕ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ ಯೋಜನೆಯ ಅರ್ಹತೆ, ಮತ್ತು ಸಲ್ಲಿಸುವ ದಾಖಲಾತಿಗಳ ಕುರಿತು ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ಜಾಲತಾಣ https://kmcdc.karnataka.gov.in ಅಥವಾ ನಿಗಮದ ಮೊಬೈಲ್ ಸಂಖ್ಯೆ 8867537799 ಅಥವಾ ದೂರವಾಣಿ ಸಂಖ್ಯೆ 080-29903994, 221847 ಅಥವಾ ಕೊಪ್ಪಳ ಕಚೇರಿ ದೂ.ಸಂ: 08539-224817 ಗೆ ಸಂಪರ್ಕಿಸುವುದು ಅಥವಾ ಆಯಾ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದವರ ಕಚೇರಿಯವರನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
