
ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 5- ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾಲಂಬಿ ಸಾರಥಿ ಯೋಜನೆ, ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಈ ಎಲ್ಲಾ ಯೋಜನೆಗಳಡಿ ಸವಿತಾ ಸಮಾಜದ ಅರ್ಹರು ಸೇವಾ ಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸಲು ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅಭ್ಯರ್ಥಿಗಳು ಅಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ http://sevasindhu,karnataka.gov.in ನಲ್ಲಿ ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಗಳವಾರು ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ, ದಾಖಲೆಗಳ ಮಾಹಿತಿಯನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kssd.karnataka.gov.in ನಲ್ಲಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832, ಮೊ.ಸಂ: 8050770004, 8050770005 ಹಾಗೂ ಕೊಪ್ಪಳ ಜಿಲ್ಲಾ ಕಚೇರಿ ದೂ.ಸಂ: 08539-221847 ಗೆ ಸಂಪರ್ಕಿಸಬಹುದುದಾಗಿದೆ ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಕೊಪ್ಪಳದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.