
ವಿಜಯನಗರ : ಪೋಷಣ ಅಭಿಯಾನ ಕಾರ್ಯಕ್ರಮ ಯಶಸ್ವಿ
ಕರುನಾಡ ಬೆಳಗು ಸುದ್ದಿ
ವಿಜಯನಗರ, 25- ಕೇಂದ್ರ ಸಂವಹನ ಇಲಾಖೆ, ಶಿವಮೊಗ್ಗ-ಬಳ್ಳಾರಿ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಶಿಶು ಅಭಿವೃದ್ಧಿ ಯೋಜನೆ, ಆರೋಗ್ಯ ಇಲಾಖೆ, ಹೂವಿನಹಡಗಲಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ. ವಿಜಯನಗರ. ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟಂಬರ್ ೨೪ರಂದು ಹೂವಿನಹಡಗಲಿಯ ಪಂಚಮಸಾಲಿ ಸಮುದಾಯ ಭವನದಲ್ಲಿ ಪೋಷಣ ಅಭಿಯಾನ, ಪಿ.ಎಂ. ಸೂರ್ಯ ಘರ್ ಯೋಜನೆ, ವಿಕಸಿತ ಭಾರತ ಬಜೆಟ್. ಹೊಸ ಕ್ರಿಮಿನಲ್ ಕಾನೂನುಗಳು ಹಾಗೂ ಪಿ.ಎಂ ದೂರದರ್ಶಿತ್ವ-೨೦೪೭, ಛಾಯಾಚಿತ್ರ ಪ್ರದರ್ಶನ ಹಾಗೂ ವಿಶೇಷ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಹೂವಿನಹಡಗಲಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೃಷ್ಣನಾಯ್ಕ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಇತ್ತಿಚಿನ ದಿನಗಳಿಗೆ ಹೊಂದಿಕೊಳ್ಳುವ ಹಾಗೆ ಯೋಜನೆಗಳನ್ನು ರೂಪಿಸಿದೆ.
ಅವುಗಳನ್ನು ಸಾರ್ವಜನಿಕರು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕು. ಕೇಂದ್ರ ಸರ್ಕಾರದ ಯೋಜನೆಯಾದ ಪಿ.ಎಂ. ಸೂರ್ಯ ಘರ್ ಯೋಜನೆಯೂ ಭಾರತದ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಿರುವ ಯೋಜನೆಯಾಗಿದೆ. ಈ ಯೋಜನೆ ಅಡಿಯಲ್ಲಿ ಮನೆಗಳಿಗೆ ಛಾವಣಿ ಮೇಲೆ ಸೌರ ಫಲಕಗಳನ್ನು ಸ್ಥಾಪಿಸಲು ಸಹಾಯಧನವನ್ನು ಒದಗಿಸಲಾಗುತ್ತದೆ. ಇತ್ತೀಚಿನ ದಿನಗಳಿಗೆ ಸೂಕ್ತವಾಗುವ ರೀತಿಯಲ್ಲಿ ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿ ಮಾಡಲಾಗಿದ್ದು, ವೈಜ್ಞಾನಿಕ ಯುಗಕ್ಕೆ ಹೊಂದಿಕೊಳ್ಳುವ ರೀತಿಯಲ್ಲಿವೆ.
ನೊಂದವರಿಗೆ ನ್ಯಾಯಾ ಒದಗಿಸುವುದು ಈ ಕಾನೂನುಗಳ ಮುಖ್ಯ ಉದ್ದೇಶವಾಗಿದೆ. ಇವುಗಳಿಂದ ಅಪರಾದ ಪ್ರಕರಣಗಳನ್ನು ತಡೆಯಬುಹುದು. ಇದಲ್ಲದೆ ಪಿಎಂ ಕಿಸಾನ್, ಕಿಸಾನ್ ಸನ್ಮಾನ್, ಆಯುಷ್ಮಾನ್ ಭಾರತ್, ಅಟಲ್ ಪಿಂಚಣಿ ಯೋಜನೆ, ಹೀಗೆ ಅನೇಕ ಮಹತ್ವದ ಯೋಜನೆಗಳನ್ನು ಕೇಂದ್ರ ಸರ್ಕಾರವು ಸಾರ್ವಜನಿಕರ ಹಿತದೃಷ್ಠಿಯಿಂದ ರೂಪಿಸಿದೆ. ಅವುಗಳನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೂವಿನಹಡಗಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರು ಕೊಂಚಿಗೇರಿ, ಹೂವಿನಹಡಗಲಿ ಕರ್ನಾಟಕ ಪ್ರೆಸ್ ಕ್ಲಬ್‌ನ ಅಧ್ಯಕ್ಷ ಹೆಚ್.ಸುಭಾಸಚಂದ್ರ, ಹೂವಿನಹಡಗಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಅಧ್ಯಕ್ಷ ಪರುಶುರಾಮ, ಗಣ್ಯರಾದ ವಾರದ ಗೌಸ್, ತೋಟಾ ನಾಯಕ್, ಪರಮೇಶ್ವರ, ವೀರಸಿಂಗ್ ನಾಯಕ್, ಶಶಿಧರ್, ಹಾಲಪ್ಪ, ತೋಟಪ್ಪ ಅವರು ಉಪಸ್ಥಿತರಿದ್ದರು.