ವಿಜೇಯೆಂದ್ರ

ರೈತರಿಗೆ ತಕ್ಷಣ ಪರಿಹಾರ ನೀಡಿ : ವಿಜಯೇಂದ್ರ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 12- ಕಳೆದ ಎರಡು ವರ್ಷಮಳೆಯ ಕೊರತೆಯಿಂದ ರೈತರು ನಷ್ಟ ಅನುಭವಿಸಿದ್ದಾರೆ, ಈ ಭಾರಿ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಮುರಿದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದ್ದು ಇದರ ಹೋಣೆಯನ್ನ ರಾಜ್ಯ ಸರ್ಕರ ಹೊರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.

ಅವರು ಸೋಮವಾರ ತುಂಹಭದ್ರ ಜಲಾಶಯದ ಕೊಚ್ಚಿ ಹೋದ ಗೇಟ್ ಸ್ಥಳ ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಲ ಸಂಪನ್ಮೂಲ ಸಚಿವರಿಗೆ ರೈತರ ಬಗ್ಗೆ ಹಾಗೂ ನೀರಿನ ಬಗ್ಗೆ ಕಾಳಜಿ ಇಲ್ಲಾ ಅವರು ಬೇಜವಬ್ದಾರಿ ಹೇಳಿಕೆ ಖಂಡನಿಯ ಎಂದರು.

ಇದರಿಂದ ರೈತರಿಗೆ ಸಾಕಷ್ಟು ತೊಂದರೆಯಾಗಿದೆ. ಇದಕ್ಕೆ ಪರಿಹಾರವಾಗಿ ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್ ಪ್ರದೇಶಕ್ಕೆ ₹50 ಸಾವಿರ ಪರಿಹಾರ ನೀಡಬೇಕು , ಇದರ ಹೊಣೆಗಾರಿಕೆ ತಪ್ಪಿಸಿಕೊಳ್ಳಲು ಯಾವ ಅಧಿಕಾರಿಗಳನ್ನು ಟೀಕಿಸುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಯಾರನ್ನೂ ಟೀಕಿಸದೇ ಹೊಣೆಗಾರಿಕೆಯನ್ನು ಇಲಾಖೆಯ ಸಚಿವರೇ ಹೊತ್ತುಕೊಂಡು ರೈತರಿಗೆ ಪರಿಹಾರ ನೀಡಬEಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್.ಅಶೋಕ, ಸಂಸದ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಹಾಲಪ್ಪ ಆಚಾರ್, ಮಾಜಿ ಶಾಸಕ ಬಸವರಾಜ ದಢೇಸೂಗೂರು ಹಾಗೂ ಬಿಜೆಪಿ ಕೊಪ್ಪಳ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ ಇದ್ದರು.

Leave a Reply

Your email address will not be published. Required fields are marked *

error: Content is protected !!