ಗ್ರಾ.ಪಂ. ಜಿಪಿಟಿಎಸ್ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಶಿಬಿರ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ,14- ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ ಇವರ ಸಹಯೋಗದಲ್ಲಿ ಸಿರುಗುಪ್ಪ ತಾಲೂಕಿನ ಎಂ. ಸೂಗೂರು ಗ್ರಾಮ ಪಂಚಾಯಿತಿಯಲ್ಲಿ ಜಿಪಿಟಿಎಫ್ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಶಿಬಿರ ಗಳನ್ನು ಹಮ್ಮಿಕೊಂಡು ತರಬೇತಿ ನೀಡಲಾಯಿತು.
ತರಬೇತಿ ಕಾರ್ಯಗಾರಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಹಮ್ಮದ್ ಕಾಸಿಂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಕಿರಣ್ ಸಮುದಾಯ ಆರೋಗ್ಯ ಅಧಿಕಾರಿಗಳು ಹೇಮಾವತಿ ಮೇಲ್ವಿಚಾರಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅರುಣ ಕುಮಾರಿ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ತರಬೇತಿ ಕಾರ್ಯಗಾರವನ್ನು ನಡೆಸಿಕೊಟ್ಟರು.
ಶಿಬಿರದಲ್ಲಿ ಅನಿಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಸಾರ್ವತ್ರಿಕ ಲಸಿಕೆಗಳು ಪೌಷ್ಟಿಕ ಆಹಾರ ರಕ್ತಹೀನತೆ ಕ್ಷಯರೋಗ ಅಸಾಂಕ್ರಾಮಿಕ ರೋಗಗಳಾದ ಮಧುಮೇಹ ಅಧಿಕ ರಕ್ತದೊತ್ತಡ ಕ್ಯಾನ್ಸರ್ ಬಾಲ್ಯ ವಿವಾಹ ನಿಷೇಧ ಹದಿಹರೆಯದ ಆರೋಗ್ಯ ಮುಟ್ಟಿನ ನೈರ್ಮಲ್ಯ ಮಾನಸಿಕ ಆರೋಗ್ಯ ಶುದ್ಧ ನೀರು ಸ್ವಚ್ಛ ಪರಿಸರ ಡೆಂಗ್ಯೂ ಜ್ವರ ಮಾರಕ ರೋಗಗಳ ಅರಿವು ಕುರಿತಂತೆ ಮಾಹಿತಿ ನೀಡಲಾಯಿತು.
ನಂತರದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳುವ ಕ್ರಿಯಾಯೋಜನೆ ರಚಿಸಲಾಯಿತು.
ತರಬೇತಿಯ ಉದ್ದೇಶ ದೇಶದ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸುವುದು, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರೂ ಸೇರಿದಂತೆ ಎಲ್ಲರ ಆರೋಗ್ಯ ಪರಿಸ್ಥಿತಿಯಲ್ಲಿ ಗಮನಾರ್ಹ ಸುಧಾರಣೆ ತರುವುದು, ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯು ಎಲ್ಲರಿಗೂ ಸಿಗುವಂತೆ ಮಾಡುವುದು, ತರಬೇತಿಯಲ್ಲಿ ಶಿವಮೂರ್ತಿ ಗ್ರಾ.ಪಂ. ಕಾರ್ಯದರ್ಶಿಗಳು ಮತ್ತು ಸಿಬ್ಬಂದಿ ಸಹಕಾರ ನೀಡಿದರು.
ಶಿಬಿರದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳು ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮತ್ತು ಜಿಪಿಟಿಎಫ್ ಸದಸ್ಯರು ಹಾಜರಿದ್ದರು.
