
ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನಕ್ಕೆ ವಿಶ್ವನಾಥ ಚಾಲನೆ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 10- ತಾಲೂಕು ಇಬ್ರಾಹಿಂಪುರ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಮತಗಟ್ಟೆಯಲ್ಲಿ ತಹಶೀಲ್ದಾರ್ ಎಚ್ ವಿಶ್ವನಾಥ ಅವರು ಮತದಾರರ ಪಟ್ಟಿ ಪರಿಷ್ಕರಣೆ ಸೇರ್ಪಡೆ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದರು.
ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಸಿರುಗುಪ್ಪ ತಾಲೂಕಿನ ಇಬ್ರಾಹಿಂಪುರ್ ಗ್ರಾಮದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ೨೦೨೫ ಅಭಿಯಾನಕ್ಕೆ ಅವರು ಭೇಟಿ ನೀಡಿ ಮಾತನಾಡಿ ಅಕ್ಟೋಬರ್ ೨೯ ರಿಂದ ನವೆಂಬರ್ ೨೮ರ ವರೆಗೆ ಮತದಾರರ ಪಟ್ಟಿಯಲ್ಲಿ ಹೆಸರುಗಳ ಸೇರ್ಪಡೆ ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸುವ ವಿಶೇಷ ಅದಾಲತ್ ನಡೆಯಲಿದೆ ಸಿರುಗುಪ್ಪ ತಾಲೂಕಿನಲ್ಲಿ ವಿಶೇಷವಾಗಿ ಶನಿವಾರ ಭಾನುವಾರ ನಾಲ್ಕನೇ ಶನಿವಾರ ಭಾನುವಾರ ವಿಶೇಷ ಅಭಿಯಾನವನ್ನು ಪ್ರತಿ ಮತಗಟ್ಟೆಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದರು.
ಮತದಾರರ ಪಟ್ಟಿ ಸೇರ್ಪಡೆಗೆ ಅರ್ಜಿಯನ್ನು ಸಲ್ಲಿಸಿ ಸಾರ್ವಜನಿಕರು ಮತಗಟ್ಟೆ ಅಧಿಕಾರಿಗಳ ಬಳಿ ತೆರಳಿ ಜನವರಿ ೨೫ಕ್ಕೆ ೧೮ ವರ್ಷ ಪೂರ್ಣ ಗೊಳಿಸುವವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೆ ನಮೂನೆ-೬ ಅರ್ಜಿಗಳನ್ನು ಸಲ್ಲಿಸಬೇಕು ಅದೇ ರೀತಿ ಯಾರಾದರೂ ಮರಣ ಹೊಂದಿದ್ದಲ್ಲಿ ಹೆಣ್ಣು ಮಕ್ಕಳು ಮದುವೆಯಾಗಿ ಹೋಗಿದ್ದಲ್ಲಿ ಮತ್ತು ಯಾವುದೇ ಮತದಾರರು ಬೇರೆ ಸ್ಥಳಗಳಿಗೆ ಶಾಶ್ವತವಾಗಿ ವಲಸೆ ಹೋಗಿದ್ದಲ್ಲಿ ನಮೂನೆ- ೭ ರಲ್ಲಿ ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ವಯಸ್ಸು ಇತರೆ ಯಾವುದೇ ತಿದ್ದುಪಡಿ ಇದ್ದಲ್ಲಿ ಮತ್ತು ಇದೇ ಕ್ಷೇತ್ರದ ಬೇರೆ ಮತಗಟ್ಟೆಗಳಿಗೆ ವರ್ಗಾವಣೆ ಗೊಳ್ಳುವವರಿದ್ದಲ್ಲಿ ನಮೂನೆ-೮ ಅರ್ಜಿ ಸಲ್ಲಿಸಬೇಕು ಎಂದರು.
ಕ0ದಾಯ ಪರಿವೀಕ್ಷಕ ಮಂಜುನಾಥ, ರಾಷ್ಟ್ರೀಯ ಸಾಕ್ಷರತಾ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ, ಶಿಕ್ಷಕರು ಮತ್ತಿತರರು ಇದ್ದರು.