17ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್ವ್ಯೂವ್
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 174- ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಇಂಟರ್ವ್ಯೂವ್ ಅನ್ನು ಆಗಸ್ಟ್ 17 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಈ ವಾಕ್ ಇನ್ ಇಂಟರ್ವ್ಯೂವ್ನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಇಂಟರ್ವ್ಯೂವ್ಗೆ ಎಲ್ಲರಿಗೂ ಉಚಿತ ಪ್ರವೇಶವಿದ್ದು, ಯಾರಿಗೂ ಶುಲ್ಕವಿರುವುದಿಲ್ಲ. ಎಸ್.ಎಸ್.ಎಲ್.ಸಿ., ಪಿಯುಸಿ, ಡಿಪ್ಲೊಮಾ, ಟೂಲ್ ಮತ್ತು ಡೈಮೇಕಿಂಗ + ಬಿಇ ಮೆಕಾನಿಕಲ್, ಬಿಇ ಎಲೆಕ್ಟ್ರಿಕಲ್, ಎಮ್ಎಸಿ ಮೇಥಮೆಟಿಕ್ಸ್, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಇಂಟರ್ವ್ಯೂವ್ನಲ್ಲಿ ಭಾಗವಹಿಸಬಹುದು.
ವಾಕ್ ಇನ್ ಇಂಟರ್ವ್ಯೂವ್ನಲ್ಲಿ ಭಾಗವಹಿಸುವ ಅಭ್ಯರ್ಥಿಗಳು (ಯುವಕ ಮತ್ತು ಯವತಿಯರು) ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಹಾಜರಾಗಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
