
ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಕಾರ್ಯಾಗಾರ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 30- ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ವತಿಯಿಂದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಂಬಾಕು ಮುಕ್ತ ಯುವ ಅಭಿಯಾನ ೨.೦ ಅಂಗವಾಗಿ ಪೋಲಿಸ್ ಇಲಾಖೆಯ ಸಿಬ್ಬಂದಿಗಳಗೆ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಹಾಗೂ ಕೊಟ್ಪಾ-೨೦೦೩ ಕಾಯ್ದೆ ಕುರಿತು ಉಪನ್ಯಾಸ ಕಾರ್ಯಾಗಾರವು ನಗರದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಡೆಯಿತು.
ಹೆಚ್ಚುವರಿ ಪೋಲಿಸ್ ಅಧೀಕ್ಷಕರಾದ ಹೇಮಂತ ಕುಮಾರ ಅವರು ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ ಅವರು ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಹಾಗೂ ಕೊಟ್ಪಾ-೨೦೦೩ ಕಾಯ್ದೆ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಪೋಲಿಸ್ ಇನ್ಸ್ಪೆಕ್ಟರ್ ಶಿವರಾಜ ಇಂಗಳೆ ಸೇರಿದಂತೆ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಿಬ್ಬಂದಿಗಳು ಹಾಗೂ ಪೋಲಿಸ್ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.