
oplus_131074
ಜಿಲ್ಲಾಸ್ಪತ್ರೆಯಲ್ಲಿ ವಿಶ್ವ ಮೆದುಳು ದಿನಾಚರಣೆ ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 24-ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಬೋಧಕ ಆಸ್ಪತ್ರೆಯ ಸಹಯೋಗದಲ್ಲಿ ಜುಲೈ 22ರಂದು ಜಿಲ್ಲಾಸ್ಪತ್ರೆಯಲ್ಲಿ ವಿಶ್ವ ಮೆದುಳು ದಿನವನ್ನು ಜಿಲ್ಲಾ ಕುಷ್ಟ ರೋಗ ನಿರಮೂಲನ ಅಧಿಕಾರಿಗಳು ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿಗಳಾದ ಡಾ.ಪ್ರಕಾಶ್ ಅವರು, ಮೆದುಳಿನ ಆರೋಗ್ಯ, ಅದರ ರಕ್ಷಣೆ ಹಾಗೂ ಮಾನಸಿಕ ಆರೋಗ್ಯ ವೃದ್ಧಿಸಿಕೊಳ್ಳ ಕುರಿತು ಮತ್ತು ಮೆದುಳಿನ ಆರೋಗ್ಯಕ್ಕೆ ಸಂಬಂಧಪಟ್ಟಂತಹ ವೈದ್ಯಕೀಯ ಸೌಲಭ್ಯಗಳು, ಜಿಲ್ಲಾಸ್ಪತ್ರೆಯಲ್ಲಿ ಪಡೆದುಕೊಳ್ಳುವಂತಹ ಯೋಜನೆಗಳ ಬಗ್ಗೆ ತಿಳಿಸಿದರು.
ಡಾ.ಸಂಗನಬಸಪ್ಪ ಅವರು ಮಾತನಾಡಿ, ಮೆದುಳಿನ ಆರೋಗ್ಯವು ಅತ್ಯಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿರುತ್ತದೆ ಎಂದರು. ಪಾರ್ಸಿ, ಪಿಡ್ ತಲೆನೋವು, ಮರುವಿನ ಕಾಯಿಲೆ ಇನ್ನೂ ಅನೇಕ ತರನಾದಂತಹ ನರರೋಗದ ಸಮಸ್ಯೆಗಳಿಗೆ ವೈದ್ಯಕೀಯ ತುರ್ತು ಸೌಲಭ್ಯವನ್ನು ಪಡೆದುಕೊಳ್ಳ ಬಗ್ಗೆ ತಿಳಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ಪೂಜಾರ ಅವರು ಮಾತನಾಡಿ, ಇತ್ತೀಚಿನ ದಿನಮಾನಗಳಲ್ಲಿ ಮೆದುಳಿನ ಆರೋಗ್ಯವು ತನ್ನದೇ ಆಗಿರುವಂತಹ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಸಾರ್ವಜನಿಕರು ಅವಶ್ಯಕತೆ ಇದ್ದರೆ ತುರ್ತು ಸೇವೆಗಳನ್ನ ಮರೆಯದೆ ಪಡೆದುಕೊಂಡು ತಮ್ಮ ಅಮೂಲ್ಯವಾದ ಅಂತಹ ಜೀವನವನ್ನು ರಕ್ಷಿಸಿಕೊಳ್ಳಬೇಕು. ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯಿಂದ ವಿವಿಧ ಯೋಜನೆಗಳು ಜಿಲ್ಲಾಸ್ಪತ್ರೆ, ತಾಲೂಕಾಸ್ಪತ್ರೆಗಳಲ್ಲಿ ಪ್ರಾರಂಭವಾಗಿವೆ. ಅವುಗಳ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕರ್ನಾಟಕ ಬ್ರೌನ್ ಹೆಲ್ತ್ ಇನಿಶಿಯೇಟಿವ್ ಕೊಪ್ಪಳ ಜಿಲ್ಲಾ ಸಂಯೋಜಕರಾದ ನವೀನ್ ಅವರು ಮಾತನಾಡಿ, ರಾಜ್ಯ ಸರ್ಕಾರದ ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಿಮಾನ್ ಸಹಯೋಗದೊಂದಿಗೆ ಕರ್ನಾಟಕ ಬೈನ್ ಹೆಲ್ ಕ್ಲಿನಿಕ್ ಗಳನ್ನು 32 ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರಾರಂಭಿಸಲಾಗಿದೆ. ಇಲ್ಲಿ ಪಾರ್ಸಿ ಬೀಟ್ಸ್, ತಲೆನೋವು, ಮರುವಿನ ಕಾಯಿಲೆ ಹಾಗೂ ಇನ್ನೂ ಮುಂತಾದ ನರರೋಗಕ್ಕೆ ಸಂಬಂಧಿಸಿದಂತಹ ಕಾಯಿಲೆಗಳಿಗೆ ಚಿಕಿತ್ಸೆಯನ್ನು ನೀಡಲಾಗುವುದು. ಅವಶ್ಯಕತೆ ಇದ್ದರೆ ನಿಮಾನ್ ತಜ್ಞ ವೈದ್ಯರಿಂದ ಸಲಹೆ ಪಡೆದುಕೊಂಡು ಚಿಕಿತ್ಸೆಯನ್ನು ನೀಡಲಾಗುವುದು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಡಾ.ಬಸಂತ್ ಕುಮಾರ್ ಪಾಟೀಲ್ ಅವರು ಮಾತನಾಡಿ, ಮೆದುಳಿನ ಆರೋಗ್ಯವು ಹಾಗೂ ಮಾನಸಿಕ ಆರೋಗ್ಯವು ಹೆಚ್ಚು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ. ಜಿಲ್ಲಾಸ್ಪತ್ರೆಗಳಲ್ಲಿ ಸಿಗುವಂತಹ ಸೂಕ್ತ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಆರೋಗ್ಯ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
