
10 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 9- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಿವಿಯ ಎನ್ಎಸ್ಎಸ್ ಘಟಕ ಹಾಗು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ಅ.10 ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ವಿವಿಯ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರೂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ನ್ಯಾ.ಕೆ.ಜಿ ಶಾಂತಿ ಅವರು ಕಾರ್ಯಕ್ರಮ ಉದ್ಘಾಟಿಸಲಿರುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ನ್ಯಾ.ರಾಜೇಶ್.ಎನ್ ಹೊಸಮನೆ ಅವರು ಘನ ಉಪಸ್ಥಿತರಿರುವರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ,ವೈ.ರಮೇಶ್ ಬಾಬು, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತç ಚಿಕಿತ್ಸಕ ಡಾ.ಎನ್ ಬಸರೆಡ್ಡಿ, ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ಜಿ.ರಮೇಶ್ ಬಾಬು, ವಿವಿಯ ಮೌಲ್ಯಮಾಪನ ಕುಲಸಚಿವರಾದ ಪ್ರೊ.ರಮೇಶ್ ಓಲೇಕಾರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ವೀರೇಂದ್ರ ಕುಮಾರ್ ಕೆ.ಜಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನೋರೋಗ ತಜ್ಞ ಡಾ.ರೋಹನ್ ಹೊನಗುಂದಿ ಅವರು ಕಾರ್ಯಕ್ರಮ ಕುರಿರು ವಿಶೇಷ ಉಪನ್ಯಾಸ ನೀಡುವರು.