
19 ರಂದು ಗೃಹರಕ್ಷಕ ದಳ ಸದಸ್ಯ ಸ್ಥಾನಗಳಿಗೆ ಲಿಖಿತ & ದೈಹಿಕ ಪರೀಕ್ಷೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 16- ಗೃಹರಕ್ಷಕ ದಳ ಸದಸ್ಯರಾಗಲು ಬಯಸಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಮತ್ತು ದೈಹಿಕ ಪರೀಕ್ಷೆಯನ್ನು ಅ. ೧೯ ರಂದು ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ ಪೊಲೀಸ್ ಅಧೀಕ್ಷಕರು ಹಾಗೂ ಕೊಪ್ಪಳ ಗೃಹ ರಕ್ಷಕ ದಳದ ಆಯ್ಕೆ ಸಮಿತಿಯ ಅಧ್ಯಕ್ಷರ ಆದೇಶದಂತೆ ಕೊಪ್ಪಳ ಜಿಲ್ಲೆಯ ಗೃಹರಕ್ಷಕ ದಳದಲ್ಲಿ ಖಾಲಿ ಇರುವ ೧೨೮ ಸ್ಥಾನಗಳಿಗೆ ೨೦೨೪ರ ಫೆಬ್ರವರಿ ಮಾಹೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಹೊಸದಾಗಿ ಗೃಹರಕ್ಷಕ ದಳದ ಸದಸ್ಯರಾಗಲು ಬಯಸಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಮತ್ತು ದೈಹಿಕ ಪರೀಕ್ಷೆಯನ್ನು ಹಮ್ಮಿಕೊಂಡಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಮೂಲ ಆಧಾರ ಕಾರ್ಡ ನೊಂದಿಗೆ ಅ.೧೯ರಂದು ಬೆಳಗ್ಗೆ ೭.೪೫ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ತಪ್ಪದೆ ಹಾಜರಾಗಬೇಕು ಎಂದು ಕೊಪ್ಪಳದ ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟರು ಪ್ರಕಟಣೆ ತಿಳಿಸಿದ್ದಾರೆ.